ಜಾತಿ ನಿಂದನೆಯಿಂದ ಬೇಸತ್ತು ಮಹಿಳಾ ಸೆಕ್ಯೂರಿಟಿ ಗಾರ್ಡ್’ನಿಂದ ಆತ್ಮಹತ್ಯೆಗೆ ಯತ್ನ
ಕಾರ್ಕಳದ ಪ್ರತಿಷ್ಠಿತ ಕಾಲೇಜಿನ ಸೂಪರ್ ವೈಸರ್ ನ ಕಿರುಕುಳಕ್ಕೆ ಬೇಸತ್ತ ಮಹಿಳಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.
ಸುನೀತಾ (33) ಆತ್ಮಹತ್ಯೆಗೆ ಯತ್ನಿಸಿದವರು. ಇವರು ಕಾಲೇಜಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಕೊಂಡಿದ್ದು, ಕೆಲಸಕ್ಕೆ ಸೇರಿದ ಒಂದು ತಿಂಗಳ ಬಳಿಕ ಕಾಲೇಜಿನಲ್ಲಿ ಸೆಕ್ಯುರಿಟಿ ಸೂಪರ್’ವೈಸರ್ ಆಗಿ ಕೆಲಸ ಮಾಡಿಕೊಂಡಿರುವ ಹಿರಿಯಣ್ಣ ಎಂಬವರು ಜಾತಿ ನಿಂದನೆ ಮಾಡುತ್ತಾ ಬಂದಿದ್ದು ಸಣ್ಣಪುಟ್ಟ ವಿಚಾರಕ್ಕೂ ಕುಮಾರಿ ಕಿರಿಕಿರಿ ಮಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಕುಮಾರಿ ಸುನೀತಾ ಎರಡು ಬಾರಿ ಕಾಲೇಜಿನ ಮೇಲಾಧಿಕಾರಿಯವರಿಗೆ ದೂರು ನೀಡಿದ್ದರು. ಆದರೆ ಯಾವುದೇ ಕ್ರಮ ಆಗಿಲ್ಲ. ಇದರಿಂದ ಬೇಸತ್ತ ಸುನೀತಾ ಇಂದು ಕಾಲೇಜಿನಲ್ಲಿ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದರು.
ಬಳಿಕ ಅವರನ್ನು ಕಾರ್ಕಳ ಸರಕಾರಿಗೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka