ಹುಲಿವೇಷಧಾರಿ ಜಯಾನಂದ ಆಚಾರ್ಯ ಹತ್ಯೆ: ಯುವಕನ ಬಂಧನ

ಮಂಗಳೂರು: ಹುಲಿವೇಷಧಾರಿ ಜಯಾನಂದ ಆಚಾರ್ಯ ಎಂಬುವವರನ್ನು ಯುವಕನೋರ್ವ ಕೊಲೆಗೈದ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ನಡೆದಿದೆ.
ಕೊಲೆ ಆರೋಪಿ ಕುಂಜತ್‌ಬೈಲ್ ದೇವಿನಗರದ ರಾಜೇಶ್ ಪೂಜಾರಿ (31) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹುಲಿವೇಷಧಾರಿಯಾಗಿದ್ದ ಜಯಾನಂದ ಆಚಾರ್ಯರ ಮೃತದೇಹ ಕುತ್ತಿಗೆಗೆ ದಾರ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಜಯಾನಂದರ ಸಹೋದರ ಅಚ್ಚುತ ಆಚಾರ್ಯ ಎಂಬವರು ಕೊಲೆ ಶಂಕೆ ವ್ಯಕ್ತಪಡಿಸಿ ಕಾವೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಕಾವೂರು ಪೊಲೀಸರು ತನಿಖೆ ನಡೆಸಿದಾಗ ಆರೋಪಿ ರಾಜೇಶ್ ಪೂಜಾರಿ ಕೊಲೆ ನಡೆಸಿರುವುದಾಗಿ ತಿಳಿದುಬಂದಿದ್ದು, ಅದರಂತೆ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka