ಮಾಂಸ ತಿಂದು ದೇವಸ್ಥಾನಕ್ಕೆ ಹೋದ ಸಿ.ಟಿ.ರವಿ ವಿರುದ್ಧ ಜೆಡಿಎಸ್ ಪ್ರತಿಭಟನೆ
23/02/2023
ಚಿಕ್ಕಮಗಳೂರು: ಸಿ.ಟಿ.ರವಿ ಮಾಂಸ ತಿಂದು ದೇವಾಲಯಕ್ಕೆ ಹೋದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇದೇ ವೇಳೆ ಸಿ.ಟಿ.ರವಿ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು, ತೊಲಗಲಿ, ತೊಲಗಲಿ ಸಿ.ಟಿ.ರವಿ ತೊಲಗಲಿ ಎಂದು ಘೋಷಣೆ ಕೂಗಿದರು.
ಹಿರಿಯರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಸಿ.ಟಿ.ರವಿ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಶಾಸಕ ಸಿ.ಟಿ. ರವಿ ಹೇಳುವುದು ಒಂದು, ಮಾಡುವುದು ಎಂದು ಟೀಕಿಸಿದರು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw