ಬಿಜೆಪಿ—ಜೆಡಿಎಸ್ ಪಾದಯಾತ್ರೆಯಿಂದ ಹಿಂದೆ ಸರಿದ ಜೆಡಿಎಸ್!
ಬೆಂಗಳೂರು: ಮೂಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ವಿರುದ್ಧ ಬಿಜೆಪಿ—ಜೆಡಿಎಸ್ ಶನಿವಾರ ಪಾದಯಾತ್ರೆಗೆ ನಡೆಸುವುದಾಗಿ ಘೋಷಿಸಿದ್ದರು. ಆದರೆ ಇದೀಗ ಜೆಡಿಎಸ್ ಈ ಪಾದಯಾತ್ರೆಯಿಂದ ಹಿಂದಕ್ಕೆ ಸರಿಯುವ ಮೂಲಕ ಬಿಜೆಪಿಗೆ ಶಾಕ್ ನೀಡಿದೆ.
ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಪೀಠಿಕೆ ಹಾಕಿರುವ ಕಮಿಟಿ ಅಧ್ಯಕ್ಷ ಶಾಸಕ ಜಿ.ಟಿ.ದೇವೇಗೌಡ, ರಾಜ್ಯದಲ್ಲಿ ಮಳೆ, ಪ್ರವಾಹ ಉಂಟಾಗಿದೆ. ಇದಲ್ಲದೇ ಮುಖ್ಯವಾಗಿ ನಮ್ಮ ನಾಯಕರಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಬಜೆಟ್ ಅಧಿವೇಶನದಲ್ಲಿ ಇದ್ದಾರೆ. ಅವರು ಇಲ್ಲದ ನಾಯತ್ವದಲ್ಲಿ ನಾವು ಹೋರಾಟ ಮಾಡಲ್ಲ ಅಂತ ಹೇಳಿದ್ದಾರೆ.
ಪಾದಯಾತ್ರೆ ನಡೆಸಲು ಬಿಜೆಪಿಯವರೇ ತೀರ್ಮಾನ ಕೈಗೊಂಡಿದ್ದರು. ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎನ್ನುವ ಆರೋಪ ಕೂಡ ಜೆಡಿಎಸ್ ಕಡೆಯಿಂದ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: