ಜ್ಯುವೆಲ್ಲರಿ ಸಿಬ್ಬಂದಿಯ ಹತ್ಯೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.
ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ.
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ(50) ಎಂಬುವವರನ್ನು ಫೆಬ್ರವರಿ 3ರಂದು ಅಂಗಡಿಯಲ್ಲೇ ಚೂರಿಯಿಂದು ಕೊಲೆ ಮಾಡಲಾಗಿತ್ತು.
ಅಂದು ಮಧ್ಯಾಹ್ನ ಅಂಗಡಿಯ ಮಾಲಕ ಊಟಕ್ಕೆ ತೆರಳಿ ವಾಪಸ್ ಬಂದ ವೇಳೆ ಮಾಸ್ಕ್ ಧರಿಸಿದ್ದ ದುಷ್ಕರ್ಮಿಯೋರ್ವ ಅವರನ್ನು ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಈ ವೇಳೆ ಜ್ಯುವೆಲ್ಲರಿಯಲ್ಲಿ ಪ್ರದರ್ಶನಕ್ಕಿಡಲಾಗಿದ್ದ ಚಿನ್ನಾಭರಣದಲ್ಲಿ ಕೆಲವು ಕಳ್ಳತನ ಆಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw