ಝಾನ್ಸಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಪ್ರಕರಣ: 10 ನವಜಾತ ಶಿಶು ಸಾವು; ತನಿಖೆಗೆ ಆದೇಶ
ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ ನಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತ ಪ್ರಕರಣದಲ್ಲಿತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಲಾಗಿದ್ದ ಕನಿಷ್ಠ 10 ಶಿಶುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಅಲ್ಲದೇ 16 ಶಿಶುಗಳು ತೀವ್ರವಾಗಿ ಗಾಯಗೊಂಡಿದೆ. ಮಹಾರಾಣಿ ಲಕ್ಷ್ಮಿ ಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಐಸಿಯುನ ಹೊರಭಾಗದಲ್ಲಿದ್ದ ಮಕ್ಕಳನ್ನು ಮತ್ತು ಒಳಭಾಗದ ಕೆಲವರನ್ನು ರಕ್ಷಿಸಲಾಗಿದೆ. ಪ್ರಾಥಮಿಕ ವರದಿಗಳ ಆಧಾರದ ಮೇಲೆ ಈ ಘಟನೆಯಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದೃಢಪಡಿಸಿದೆ.
ಈವರೆಗೆ ಏಳು ಮೃತರನ್ನು ಗುರುತಿಸಲಾಗಿದ್ದು, ಮೂವರನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಯುಪಿ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಶನಿವಾರ ತಿಳಿಸಿದ್ದಾರೆ. ಉಳಿದ ಬಲಿಪಶುಗಳನ್ನು ಗುರುತಿಸಲು ಅಗತ್ಯವಿದ್ದರೆ ಡಿಎನ್ಎ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಪಾಠಕ್ ಹೇಳಿದರು. “ಮೇಲ್ನೋಟಕ್ಕೆ ಇದು ಆಮ್ಲಜನಕ ಸಾಂಧ್ರಕದೊಳಗೆ ಶಾರ್ಟ್ ಸರ್ಕ್ಯೂಟ್ ಎಂದು ತೋರುತ್ತದೆ. ಕಾಣೆಯಾದ ನವಜಾತ ಶಿಶುಗಳಿಗಾಗಿ ನಾವು ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸುತ್ತೇವೆ” ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj