ಜೆಎನ್‌ಯುನಲ್ಲಿ ಎಬಿವಿಪಿ, ಎಡಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ: ಹಲವರಿಗೆ ಗಾಯ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡಪಂಥೀಯ ಗುಂಪುಗಳ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಘರ್ಷಣೆ ನಡೆದಿದೆ. ಮುಂಬರುವ ವಿದ್ಯಾರ್ಥಿ ಸಂಘಟನೆಯ ಚುನಾವಣೆಗಳ ಬಗ್ಗೆ ಚರ್ಚಿಸಲು ನಡೆದ ಸಾಮಾನ್ಯ ಸಭೆಯಲ್ಲಿ (ಜಿಬಿಎಂ) ಈ ಘರ್ಷಣೆ ಸಂಭವಿಸಿದೆ.
ಈ ಘಟನೆಗೆ ಸಂಬಂಧಿಸಿದಂತೆ ಎರಡೂ ಬಣಗಳು ದೂರು ದಾಖಲಿಸಿವೆ. ವಿಶ್ವವಿದ್ಯಾಲಯದ ಆಡಳಿತವು ಈ ವಿಷಯದ ಬಗ್ಗೆ ಇನ್ನೂ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಹಲವಾರು ವಿದ್ಯಾರ್ಥಿಗಳನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಂದು ವೀಡಿಯೊದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದನ್ನು ಸೆರೆಹಿಡಿದ್ರೆ, ಇನ್ನೊಂದು ವೀಡಿಯೊದಲ್ಲಿ ಯಾರೋ ವಿದ್ಯಾರ್ಥಿಗಳ ಮೇಲೆ ಬೈಸಿಕಲ್ ಎಸೆಯುವುದನ್ನು ತೋರಿಸುತ್ತದೆ. ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳನ್ನು ಪ್ರತಿನಿಧಿಸುವ ವಿದ್ಯಾರ್ಥಿಗಳು ಪರಸ್ಪರರ ವಿರುದ್ಧ ಪೊಲೀಸ್ ದೂರುಗಳನ್ನು ದಾಖಲಿಸಿದ್ದಾರೆ.
ವಿಶ್ವವಿದ್ಯಾಲಯದ ಆಡಳಿತವು ತಕ್ಷಣದ ಪ್ರತಿಕ್ರಿಯೆಯನ್ನು ನೀಡಿಲ್ಲ. ಈ ಘಟನೆಯಿಂದ ಗಾಯಗೊಂಡ ವಿದ್ಯಾರ್ಥಿಗಳ ನಿಖರ ಸಂಖ್ಯೆಯನ್ನು ದೃಢಪಡಿಸಲಾಗಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth