SSLC ಹಾಗೂ PUC ಪಾಸಾದವರಿಗೆ ಉದ್ಯೋಗಾವಕಾಶ - Mahanayaka

SSLC ಹಾಗೂ PUC ಪಾಸಾದವರಿಗೆ ಉದ್ಯೋಗಾವಕಾಶ

job news
23/07/2024

ಬೆಳಗಾವಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯ, ಬೆಳಗಾವಿ ಜಿಲ್ಲೆಯ ವಿವಿಧ ವ್ಯಾಪ್ತಿಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 313 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ನೇಮಕಾತಿಗೆ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 4ನೇ ತಾರೀಕಿನ ತನಕ ಅವಕಾಶವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳ ಮಾಹಿತಿ, ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಜಿ ಲಿಂಕ್ ಮಾಹಿತಿಯನ್ನು ಕೆಳಗಿನ ಭಾಗದಲ್ಲಿ ನೀಡಲಾಗಿದೆ.

ನೇಮಕಾತಿ ವಿವರ :


Provided by

* ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ / ಸಂಸ್ಥೆ : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

* ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ

* ಹುದ್ದೆಗಳ ಸಂಖ್ಯೆ : 313

* ಉದ್ಯೋಗ ಸ್ಥಳ : ಬೆಳಗಾವಿ

ಹುದ್ದೆಗಳ ವಿಂಗಡಣೆ:

* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 61

* ಅಂಗನವಾಡಿ ಸಹಾಯಕಿ ಹುದ್ದೆಗಳು – 252

ಶೈಕ್ಷಣಿಕ ಅರ್ಹತೆಗಳು:  ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂಥವರು ಈ ಕೆಳಗಿನಂತೆ ವಿದ್ಯಾರ್ಹತೆಗಳನ್ನು ಹೊಂದಿದ್ದರೆ ಅರ್ಜಿ ಸಲ್ಲಿಸಬಹುದು.

* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

* ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ/ Age limit – ( ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ )

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷದ ವಯೋಮಿತಿಯಲ್ಲಿರುವಂತವರು ಮಾತ್ರ ಅರ್ಜಿ ಸಲ್ಲಿಸಬಹುದು.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಆಗಿ ಆಯ್ಕೆಯಾಗುವವರಿಗೆ ಸಿಗುವ ವೇತನ : ಹುದ್ದೆಗಳಿಗೆ ಅನುಗುಣವಾಗಿ 11,000 ರೂ. ವರೆಗೆ ಮಾಸಿಕ ವೇದನೆ ಸಿಗಲಿದೆ.

 ನೇಮಕಾತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಗಳು :

* ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ – 10 ಜುಲೈ 2024

* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 04 ಆಗಸ್ಟ್ 2024

ಅರ್ಜಿ ಸಲ್ಲಿಸುವ ನೇರ ಲಿಂಕ್ : https://karnemakaone.kar.nic.in/abcd/ApplicationForm_JA_org.aspx


 

ಇತ್ತೀಚಿನ ಸುದ್ದಿ