Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ - Mahanayaka
6:58 AM Thursday 12 - December 2024

Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ

namma metro
23/06/2024

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ  ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ www.bmrc.co.in ನಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.   ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 35,000– 82,660 ರೂ. ಸಂಬಳ ನೀಡಲಾಗುತ್ತದೆ.

ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2024ರ ಜೂನ್ 14ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು 2024ರ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು- 560027 ಇವರಿಗೆ ಸಲ್ಲಿಸಬೇಕು. ಆನ್ ;ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://recruitr.bmrc.co.in/frminstructions.aspx ಈ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ