ಮೈಸೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ: ವಿವರ ಇಲ್ಲಿದೆ

mysuru city corporation
19/06/2024

ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 252 ಪೌರಕಾರ್ಮಿಕ ಗ್ರೂಪ್​ ಡಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತರು 2024ರ ಜುಲೈ 18ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 252 ಪೌರಕಾರ್ಮಿಕ ಗ್ರೂಪ್​ ಡಿ ನೌಕರರ ಹುದ್ದೆ ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದು. ಗ್ರೂಪ್​ ಡಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000– 28,950 ರೂ. ಸಂಬಳ ನೀಡಲಾಗುತ್ತದೆ.

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ/ ಕಲ್ಯಾಣ/ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಮಾತನಾಡಲು ಬಲ್ಲ ಯಾವುದೇ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳ ವಯಸ್ಸು 2024ರ ಜೂನ್ 13ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.

ಆಸಕ್ತ ಅಭ್ಯರ್ಥಿಗಳು ಮೈಸೂರಿನ ಸಯ್ಯಾಜಿರಾವ್ ರಸ್ತೆಯ ಮೈಸೂರು ಮಹಾನಗರ ಕಾರ್ಪೊರೇಷನ್ ಪ್ರಧಾನ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ಮೈಸೂರು ಇವರಿಗೆ ಸಲ್ಲಿಸಬೇಕು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version