ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಬೈಕ್ ನಲ್ಲಿ ಜಾಲಿ ರೈಡ್: ವಿಡಿಯೋ ವೈರಲ್ - Mahanayaka
10:07 PM Thursday 14 - November 2024

ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಬೈಕ್ ನಲ್ಲಿ ಜಾಲಿ ರೈಡ್: ವಿಡಿಯೋ ವೈರಲ್

jolly ride in bike
22/04/2022

ಚಾಮರಾಜನಗರ: ರಸ್ತೆಯಲ್ಲಿ ಪ್ರೇಮಿಗಳಿಬ್ಬರು ಹುಚ್ಚಾಟ ಮೆರೆದಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದ್ದು, ಯುವಕ, ಯುವತಿ ಬೈಕ್ ನಲ್ಲಿ ಜಾಲಿ ರೈಡ್(Jolly Ride) ಮಾಡಿದ್ದು, ಅಪಾಯಕಾರಿಯಾಗಿ ಪ್ರಯಾಣಿಸುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಬೈಕ್ ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಎದುರಾಗಿ ಕೂರಿಸಿಕೊಂಡಿರುವ ಯುವಕ ರಸ್ತೆ ಮೇಲೆ ಬೈಕ್ ಚಲಾಯಿಸಿದ್ದಾನೆ. ಪಲ್ಸರ್ ಬೈಕ್ ನಲ್ಲಿ ಪ್ರಯಾಣಿಸಿರುವ ಯುವಕ ಯುವತಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

ವಿಡಿಯೋದಲ್ಲಿ ಕಂಡು ಬಂದಿರುವಂತೆ, ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ನ ಮೇಲೆ ಕೂರಿಸಿಕೊಂಡಿರುವ ಯುವಕ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿದ್ದು, ಎದುರಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಅನ್ನದೇ ಬೈಕ್ ಚಲಾಯಿಸುತ್ತಿದ್ದ. ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಬೈಕ್ ನೋಂದಣಿ ಸಂಖ್ಯೆ ಚಾಮರಾಜನಗರದ್ದು ಎನ್ನಲಾಗಿದ್ದು, ಈ ಜೋಡಿ ಕೂಡ ಚಾಮರಾಜನಗರ(Chamarajanagar)ದವರು ಎಂದು ಹೇಳಲಾಗಿದೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರಸ್ತೆಯಲ್ಲಿ ಈ ರೀತಿಯ ವರ್ತನೆಗಳು ಸರಿಯೇ? ಇದರಿಂದ  ಈ ಜೋಡಿ ಅಪಾಯಕ್ಕೀಡಾಗುವುದು ಮಾತ್ರವಲ್ಲದೇ, ಇತರರ ಪ್ರಾಣದ ಜೊತೆಗೂ ಚೆಲ್ಲಾಟವಾಡಿದಂತೆ ಅಲ್ಲವೇ ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ಘಟನೆಗೆ ಸಂಬಂಧ ಪಟ್ಟಂತೆ ಸಂಚಾರಿ ಪೊಲೀಸರು ಸ್ವಯಂಪ್ರೇರಿತರಾಗಿ ತನಿಖೆ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದರ ಏರಿಕೆ: ಜಿಯೋ  ಕಳೆದುಕೊಂಡ ಗ್ರಾಹಕರ ಸಂಖ್ಯೆ ಎಷ್ಟು ಗೊತ್ತಾ?

ಅಂಬೇಡ್ಕರ್ ಕುರಿತಾದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ: ಒಟ್ಟು 6 ಲಕ್ಷ ಬಹುಮಾನ ಘೋಷಣೆ

ದೆಹಲಿಯಲ್ಲಿ 4 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆ ಸೇರಿದ್ದಾರೆ: ಅರವಿಂದ್ ಕೇಜ್ರಿವಾಲ್

ನಿವೃತ್ತಿ ಘೋಷಿಸಿದ ಕೀರನ್ ಪೊಲಾರ್ಡ್

ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಕ್ಷಮೆಯಾಚಿಸಿದ ನಟ ಅಕ್ಷಯ್ ಕುಮಾರ್ | ಈ ಬಾರಿಯಾದರೂ ಮಾತು ಉಳಿಸಿಕೊಳ್ಳುತ್ತಾರಾ?

ಇತ್ತೀಚಿನ ಸುದ್ದಿ