ಖ್ಯಾತ ಜ್ಯೋತಿಷಿಯ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ - Mahanayaka
12:00 AM Tuesday 24 - December 2024

ಖ್ಯಾತ ಜ್ಯೋತಿಷಿಯ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ

jothishi
21/03/2022

ಸುಳ್ಯ: ಸಂಪಾಜೆಯ ಚಟ್ಟೆಕಲ್ಲಿನ  ಸ್ದಳೀಯ ಜೋತಿಷ್ಯ ಮತ್ತು ಪುರೋಹಿತರಾದ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆಕೋರರು ಮಚ್ಚು ಹಿಡಿದು ಬೆದರಿಸಿ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಇವರು  ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗದಲ್ಲಿದ್ದಾರೆ. ಇತ್ತೀಚೆಗಷ್ಟೇ ಹಿರಿಯ ಪುತ್ರ ಶ್ರೀವತ್ಸ ತಮ್ಮ ಪತ್ನಿ, ಇಬ್ಬರು ಅವಳಿ ಮಕ್ಕಳೊಂದಿಗೆ ಊರಿಗೆ ಬಂದಿದ್ದರು.

ಭಾನುವಾರ  ಹಿರಿಯ ಮಗ ಶ್ರೀವತ್ಸ ಹಾಗೂ ತಂದೆ ಅಂಬರೀಶ್ ಭಟ್ ಅವರು ಮನೆಯಲ್ಲಿ  ಇಲ್ಲದ ಸಮಯದಲ್ಲಿ ಕಳ್ಳರ ಗುಂಪೊಂದು ಮನೆಗೆ ನುಗ್ಗಿದ್ದು, ಶ್ರೀವತ್ಸ ಅವರ ಪತ್ನಿಯ ತಾಳಿ ಸರವನ್ನು ಕಿತ್ತುಕೊಂಡಿದ್ದಾರೆ. ಇದರಿಂದ ಭಯಭೀತರಾದ  ಅತ್ತೆ  ಮತ್ತು  ಸೊಸೆ ತೊಟ್ಟಿಲಲ್ಲಿ ಮಲಗಿ ನಿದ್ದೆ ಮಾಡುತ್ತಿದ್ದ  ಅವಳಿ ಮಕ್ಕಳಿಗೆ ಏನೂ ಮಾಡಬೇಡಿ ಎಂದು ಗೋಗರೆದಿದ್ದಾರೆ.

ಇದೇ ಸಮಯವನ್ನು ದುರುಪಯೋಗ ಪಡಿಸಿದ ಕಳ್ಳರು  ಎಳನೀರು ಕಡಿಯವ ಮಚ್ಚು ಹಿಡಿದು ಮನೆಯ ಬೀರುವಿನ ಕೀಲಿ ಕೈ ನೀಡುವಂತೆ ಹೇಳಿದ್ದು, ಜೀವ ಭಯದಿಂದ ಮಹಿಳೆಯರು ಕೀ ನೀಡಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಸ್ತೆದಾಡುತ್ತಿದ್ದ ಬಾಲಕಿಗೆ ಡಿಕ್ಕಿ ಹೊಡೆದ ಬಿಬಿಎಂಪಿ ಕಸದ ಲಾರಿ: ಶಾಲಾ ಬಾಲಕಿ ಸಾವು

133 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಿಮಾನ ಪತನ

ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

ಭೀಕರ ಅಪಘಾತ ಖ್ಯಾತ ನಟಿ ಡಾಲಿ ಡಿಕ್ರೂಜ್ ಸೇರಿದಂತೆ ಮೂವರ ದಾರುಣ ಸಾವು!

ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

ಇತ್ತೀಚಿನ ಸುದ್ದಿ