ಏಪ್ರಿಲ್ 20: ಪತ್ರಕರ್ತ ನವೀನ್ ಸೂರಿಂಜೆ ಅವರ ‘ಸತ್ಯೊಲು’ ಪುಸ್ತಕ ಬಿಡುಗಡೆ

ಮಂಗಳೂರು: ಪತ್ರಕರ್ತ ನವೀನ್ ಸೂರಿಂಜೆ ಅವರ ‘ಸತ್ಯೊಲು’ ಶ್ರಮಿಕರ ಜನಪದ ಐತಿಹ್ಯ ಪುಸ್ತಕವು ಏಪ್ರಿಲ್ 20ರಂದು ಮಂಗಳೂರಿನ ಸಹೋದಯದಲ್ಲಿ ಸಂಜೆ 3:30ಕ್ಕೆ ಬಿಡುಗಡೆಯಾಗಲಿದೆ.
ಅಹರ್ನಿಶಿ ಪ್ರಕಾಶನದ ಮೂಲಕ ಈ ಪುಸ್ತಕ ಮೂಡಿಬಂದಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.ಪುಸ್ತಕದ ಕುರಿತು ಜನಪದ ಸಂಶೋಧಕರಾದ ಡಾ.ಗಣನಾಥ ಎಕ್ಕಾರು ಮಾತನಾಡಲಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ ಬಣ) ಜಿಲ್ಲಾ ಸಂಚಾಲಕರಾದ ಕೃಷ್ಣಾನಂದ ಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಬಹುಜನ ಚಿಂತಕಿ ಅತ್ರಾಡಿ ಅಮೃತ ಶೆಟ್ಟಿ ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ. ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚಕಟ್ಟೆ, ಲೇಖಕರಾದ ನವೀನ್ ಸೂರಿಂಜೆ ಉಪಸ್ಥಿತರಿರಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: