ಬಿಜೆಪಿ ರಥಯಾತ್ರೆಗೆ ಜೆ.ಪಿ.ನಡ್ಡ ಚಾಲನೆ: ಅಸಮಾಧಾನದಿಂದ ಸಚಿವ ಸೋಮಣ್ಣ ಗೈರು!?
ಚಾಮರಾಜನಗರ: ಚುನಾವಣಾ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ಸಂಕಲ್ಪ ಯಾತ್ರೆಗೆ ಇಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಚಾಲನೆ ಕೊಟ್ಟರು.
ಹೆಲಿಕಾಪ್ಟರ್ ಮೂಲಕ ಮಾದಪ್ಪನ ಬೆಟ್ಟಕ್ಕೆ ಬಂದಿಳಿದ ಜೆ.ಪಿ.ನಡ್ಡ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಥ್ ಕೊಟ್ಟರು.
ಸಚಿವ ಸೋಮಣ್ಣ ಗೈರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಂದರೂ ಜೊತೆಗೆ ಯಾತ್ರೆಯ ಈಶ್ವರಪ್ಪ ತಂಡದಲ್ಲಿದ್ದರೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಗೈರಾಗಿದ್ದು ಬಿಜೆಪಿಯಲ್ಲಿನ ಭಿನ್ನಮತ, ಅಸಮಾಧಾನಕ್ಕೆ ಕನ್ನಡಿ ಹಿಡಿದಿದೆ.
ಬೊಮ್ಮಾಯಿ ಅವರು ಅನುದಾನ ಕೊಟ್ಟಿಲ್ಲ ಜೊತೆಗೆ ಬೇರೆ ಬೇರೆ ಕಾರಣಗಳಿಂದ ಪಕ್ಷದ ವಿರುದ್ಧ ಸೋಮಣ್ಣ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.
ವಿಶೇಷ ಪೂಜೆ: ಜೆ.ಪಿ.ನಡ್ಡ ಅವರು ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ನಗಾರಿ ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ಕೊಟ್ಟರು.
ಯಾತ್ರೆಗೆ ಚಾಲನೆ ಸಿಕ್ಕ ಬಳಿಕ ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಇಂದಿನ ರಥಯಾತ್ರೆ ದಿಗ್ವಿಜಯದ ಯಾತ್ರೆ ಎಂದು ಬಣ್ಣಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw