ಜುಗಾರಿ ಅಡ್ಡೆಯ ಮೇಲೆ ದಾಳಿ: 7 ಮಂದಿ ಪೊಲೀಸ್ ವಶಕ್ಕೆ
ಕುಂದಾಪುರ: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಏಳು ಮಂದಿಯನ್ನು ಬಂಧಿಸಿ, 5950 ರೂ. ಹಣ ವಶಪಡಿಸಿಕೊಂಡ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಟಿ.ಟಿ ರೋಡ್ ಬಳಿ ಆ.6ರಂದು ಮಧ್ಯಾಹ್ನ ನಡೆದಿದೆ.
ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮಂಜುನಾಥ ಹಾಗೂ ಶ್ರೀಕಾಂತ ಗೌಡರ್ ಎಂದು ಗುರುತಿಸಲಾಗಿದೆ.
ಬಂಧಿತರು ಟಿ.ಟಿ ರೋಡ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಬಂಧಿತರಿಂದ 5,950 ರೂ. ಹಣ ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka