ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು
ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ನಡೆದಿದೆ.
ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿಯಾಗಿದ್ದಾಳೆ. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬಾಲಕಿ ಮೃತಪಟ್ಟಿದ್ದಾಳೆ.
ಆರಾಧ್ಯ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಬಾಲಕಿಯ ನಿಧನದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತಮಂಡಳಿ, ಶಿಕ್ಷಕ ವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಒಂದೇ ಮಳೆಗೆ ಕಿತ್ತು ಹೋದ ಪ್ರಧಾನಿಯನ್ನು ಸ್ವಾಗತಿಸಿದ್ದ ಹೊಸ ರಸ್ತೆಗಳು!
ತಾಯಿ, ಇಬ್ಬರು ಮಕ್ಕಳ ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಭಟ್ ನಿರ್ದೋಷಿ- ಹೈಕೋರ್ಟ್
ಬಾಳು ಕೊಡುತ್ತೇನೆಂದು ಮಹಿಳೆಯನ್ನು ಕರೆದೊಯ್ದ ಅರ್ಚಕ, ಕಾಡಿನಲ್ಲಿ ಬಿಟ್ಟು ಹೋದ!
ಪ್ರಕೃತಿಯ ಕುತೂಹಲಕಾರಿ ಜೀವಿಗಳ ಅದ್ಭುತ ನೋಟ: ದೈತ್ಯ ಜೀವಿಗಳ ಅಚ್ಚರಿಯ ಸಂಗತಿ