ಜ್ಯೋತಿಷಿ ಮನೆ ದರೋಡೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಸಂಪಾಜೆ: ಸಂಪಾಜೆಯ ಜ್ಯೋತಿಷಿ ಅಂಬರೀಶ್ ಭಟ್ ಮನೆ ದರೋಡೆ ಪ್ರಕರಣಕ್ಕೆ ಸಂಬಂಧ ನಾಲ್ವರು ಆರೋಪಿಗಳನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ಕಾರ್ತಿಕ್(38) ನರಸಿಂಹನ್(40) , ಹಾಸನ ಮೂಲದ ಯದುಕುಮಾರ್(33) ಹಾಗೂ ದೀಕ್ಷಿತ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನಗದು , ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಕೆಲವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಶೋಧಕಾರ್ಯ ಮುಂದುವರಿಸಿದ್ದಾರೆ.
ಸಂಪಾಜೆಯಲ್ಲಿ ಪೌರೋಹಿತ್ಯ ಹಾಗೂ ಜ್ಯೋತಿಷ್ಯ ಕಾರ್ಯದಲ್ಲಿ ತೊಡಗಿದ್ದ ಅಂಬರೀಶ್ ಅವರ ಮನೆಗೆ ಮಾ.20ರಂದು ರಾತ್ರಿ ಸುಮಾರು 8.30ರ ಹೊತ್ತಿಗೆ ನುಗ್ಗಿದ ದರೋಡೆಕೋರರು ಅಂಬರೀಶ್ ಅವರ ಸೊಸೆ ಹಾಗೂ ಪತ್ನಿಯನ್ನು ಬೆದರಿಸಿ ದರೋಡೆ ಮಾಡಿದ್ದರು. ಈ ಸಮಯದಲ್ಲಿ ಅಂಬರೀಶ್ ಭಟ್ ಹಾಗೂ ಅವರ ಪುತ್ರ ಮನೆಯಲ್ಲಿ ಇರಲಿಲ್ಲ. ಈ ಪ್ರಕರಣದ ಬಗ್ಗೆ ಅಂಬರೀಶ್ ಅವರ ಸೊಸೆ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಆರೋಪಿಗಳ ಪತ್ತೆ ಬಗ್ಗೆ ಪೊಲೀಸ್ ಅಧೀಕ್ಷಕರ ಸೋನಾವಣೆ ಋಷಿಕೇಶ್ ಭಗವಾನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್‌ಚಂದ್ರ ನಿರ್ದೇಶನದಂತೆ ಪೊಲೀಸ್ ಉಪಾಧೀಕ್ಷಕ ಗಾನಾ ಪಿ.ಕುಮಾರ್ ಅವರು ಸುಳ್ಯ ಪೊಲೀಸ್ ವೃತ್ತನಿರೀಕ್ಷಕ ನವೀನ್ ಚಂದ್ರ ಜೋಗಿ ನೇತೃತ್ವದಲ್ಲಿ ವಿವಿಧ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗಂಡಸ್ತನ ಪದ ಬಳಕೆ: ಎಚ್.ಡಿ.ಕುಮಾರಸ್ವಾಮಿ ವಿಷಾದ
ಹೆಂಡತಿ ಮೇಲಿನ ವ್ಯಾಮೋಹ: ಹೆತ್ತ ತಾಯಿಯನ್ನೇ ಕೊಂದ ಮಗ