ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಸಿಂಧಿಯಾ, “ಕಾಂಗ್ರೆಸ್ ಗೆ ವೋಟು ಹಾಕಿ” ಎಂದ ವಿಡಿಯೋ ವೈರಲ್

01/11/2020

ಭೋಪಾಲ್: ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದ  ಜ್ಯೋತಿರಾದಿತ್ಯ ಸಿಂಧಿಯಾ ಅವರು, ಮಧ್ಯಪ್ರದೇಶ ಉಪ ಚುನಾವಣೆ ಸಂದರ್ಭದಲ್ಲಿ ತನ್ನ ಹಳೆಯ ಪಕ್ಷ ಕಾಂಗ್ರೆಸ್ ಗೆ ಮತ ಚಲಾಯಿಸುವಂತೆ ಹೇಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ.


ಮಧ್ಯಪ್ರದೇಶದಲ್ಲಿ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.  ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು 22 ಶಾಸಕರು ರಾಜೀನಾಮೆ ನೀಡಿದ ಕಾರಣ ಮಧ್ಯಪ್ರದೇಶದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಗ್ವಾಲಿಯರ್ ನ ದಬ್ರಾ ಪಟ್ಟಣದ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಪರ ಮತಯಾಚಿಸುತ್ತಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ, ಬಾಯ್ತಪ್ಪಿ ಕಾಂಗ್ರೆಸ್ ಗೆ ಮತ ಚಲಾಯಿಸುವಂತೆ ಹೇಳಿದ್ದಾರೆ.


ನವೆಂಬರ್ ಮೂರರಂದು ನೀವೆಲ್ಲರೂ ಹಸ್ತಕ್ಕೆ ಮತ ಚಲಾಯಿಸುತ್ತೀರಿ ಎಂದು ನಾನು ನಂಬಿದ್ದೇನೆ ಎಂದು ಸಿಂಧಿಯಾ ಹೇಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಹರಿದಾಡುತ್ತಿದೆ. ಜ್ಯೋತಿರಾದಿತ್ಯ ಅವರು ಹೀಗೆ ಹೇಳುತ್ತಿದ್ದಂತೆಯೇ, ಸಮೀಪದಲ್ಲಿದ್ದ ಪಕ್ಷದ ಇತರ ಮುಖಂಡರು ಒಂದು ಕ್ಷಣ ಬೆಚ್ಚಿ ಬಿದ್ದು, “ಕಮಲ್”, ” ಕಮಲ್” ಎಂದು ಅವರಿಗೆ ತಾವು ಈಗ ಬಿಜೆಪಿಯಲ್ಲಿದ್ದೀರಿ ಎನ್ನುವುದನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತಾರೆ.





ಇತ್ತೀಚಿನ ಸುದ್ದಿ

Exit mobile version