ಕಬಡ್ಡಿ ತರಬೇತಿ ಕೇಂದ್ರದಲ್ಲಿ ತಂದೆ, ಮಗನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ!
ವಿಶಾಖಪಟ್ಟಣಂ: ಕಬಡ್ಡಿ ತರಬೇತಿ ಕೇಂದ್ರದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಂದೆ ಹಾಗೂ ಮಗನನ್ನು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಸಮೀಪದ ಅಚ್ಯುತ್ತಪುರಂನಲ್ಲಿ ನಡೆದಿದೆ.
50 ವರ್ಷ ವಯಸ್ಸಿನ ಬಪ್ಪಯ್ಯ ಹಾಗೂ ಆತನ ಮಗ 27 ವರ್ಷ ವಯಸ್ಸಿನ ನುಕಾಲು ಬಂಧಿತ ಆರೋಪಗಳಾಗಿದ್ದಾರೆ. ಈ ತಂದೆ ಮಗ ಸೇರಿಕೊಂಡು ಕಬಡ್ಡಿ ತರಬೇತಿ ಕೇಂದ್ರ ನಡೆಸುತ್ತಿದ್ದು, ತರಬೇರಿ ನೀಡುತ್ತಿದ್ದ ಸಂದರ್ಭದಲ್ಲಿ ಇಬ್ಬರು ಬಾಲಕಿಯರಿಗೆ ಭಾನುವಾರ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಕುರಿತು ಮಂಗಳವಾರ ಪೊಲೀಸರಿಗೆ ದೂರು ನೀಡಲಾಗಿದ್ದು, ಇದೀಗ ಸಂತ್ರಸ್ತೆಯರ ದೂರಿನನ್ವಯ ತಂದೆ ಮಗನನ್ನು ಬಂಧಿಸಿ, ಅತ್ಯಾಚಾರ ಮತ್ತು ಪೋಕ್ಸೋ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನವನ್ನೂ ಕೆಡವಿದ್ದಾರೆ | ಯು.ಟಿ.ಖಾದರ್ ಆಕ್ರೋಶ
ಮಹಿಳೆ ಮೃತಪಟ್ಟು ನಾಲ್ಕು ತಿಂಗಳ ಬಳಿಕ ಕೊರೊನಾ ಲಸಿಕೆ ನೀಡಿದ ಆರೋಗ್ಯ ಕೇಂದ್ರ!
ದೇವಸ್ಥಾನ ತೆರವು ವಿಚಾರ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪರ್ಯಾಯ ರಾಜಕೀಯ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ | ಡಾ.ಎಂ.ವೆಂಕಟಸ್ವಾಮಿ
ಟೂತ್ ಪೇಸ್ಟ್ ಎಂದು ಭಾವಿಸಿ, ಇಲಿ ವಿಷದಲ್ಲಿ ಹಲ್ಲುಜ್ಜಿದ ಯುವತಿ ಸಾವು!
ಬಿಗ್ ಬ್ರೇಕಿಂಗ್ ನ್ಯೂಸ್: ಖ್ಯಾತ ನಟ ಸೋನುಸೂದ್ ಕಚೇರಿ ಮೇಲೆ ಐಟಿ ದಾಳಿ
ಕಲಾಪದ ವೇಳೆ ಕೊನೆಯ ಸೀಟಿನಲ್ಲಿ ಕುಳಿತು ಮೌನಕ್ಕೆ ಜಾರಿದ ಮಾಜಿ ಸಿಎಂ ಯಡಿಯೂರಪ್ಪ
ಫ್ಲೈಓವರ್ ಮೇಲೆ ಬೈಕ್ ಗೆ ಡಿಕ್ಕಿ ಹೊಡೆದ ಕಾರು: 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಬೈಕ್ ಸವಾರರು