ಕಬ್ಬಿನ ಗದ್ದೆಯಲ್ಲಿ ಬೆತ್ತಲೆಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿ!
ಬೆಳಗಾವಿ: ಬಾಲಕಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದ್ದು, ಬಾಲಕಿಯನ್ನು ಬೆತ್ತಲೆಗೊಳಿಸಿ ಮೈಮೇಲೆ ಸಿಗರೇಟ್ ನಿಂದ ಸುಟ್ಟಂತಹ ಗಾಯಗಳು ಕಂಡು ಬಂದಿದೆ ಎಂದು ವರದಿಯಾಗಿದೆ.
ಬಾಲಕಿಯ ಮೈ ತುಂಬಾ ಸುಟ್ಟ ಗಾಯಗಳಾಗಿದ್ದು, ಎರಡು ದಿನಗಳ ಕಾಲ ಬಾಲಕಿ ಗದ್ದೆಯಲ್ಲಿ ನರಳಾಡಿದ್ದಾಳೆ ಎಂದು ಹೇಳಲಾಗಿದೆ. ಬಾಲಕಿಯ ನರಳಾಟದ ಶಬ್ದ ಕೇಳಿ ಇಲ್ಲಿನ ಗ್ರಾಮಸ್ಥರು ಕಬ್ಬಿನ ಗದ್ದೆಯಲ್ಲಿ ಹುಡುಕಿದಾಗ ಈ ಅಮಾನವೀಯ ದೃಶ್ಯ ಕಂಡು ಬಂದಿದೆ ಎಂದು ತಿಳಿದು ಬಂದಿದೆ.
ಬಾಲಕಿಯನ್ನು ಗ್ರಾಮಸ್ಥರು ತಕ್ಷಣವೇ ರಕ್ಷಿಸಿ ಅಥಣಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಇದೀಗ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಬಾಲಕಿಗೆ ಯಾಕೆ ಈ ರೀತಿಯಲ್ಲಿ ಚಿತ್ರ ಹಿಂಸೆ ನೀಡಲಾಗಿತ್ತು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇದರ ಜೊತೆಗೆ ಬಾಲಕಿಯನ್ನು ವಾಮಾಚಾರಕ್ಕೆ ಬಳಸಿಕೊಳ್ಳಲಾಗಿದೆಯೇ ಎನ್ನುವ ಅನುಮಾನಗಳು ಕೂಡ ಸಾರ್ವಜನಿಕವಾಗಿ ಕೇಳಿ ಬಂದಿವೆ. ಬಾಲಕಿಗೆ ಪ್ರಜ್ಞೆ ಮರಳಿದರೆ, ದುಷ್ಟರ ಕೃತ್ಯ ಬಯಲಿಗೆ ಬರಲಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಎಸ್. ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಥಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
“ನನ್ನ ಪಂಚೆ ಕಳಚ್ಕೊಂಡಿದೆ, ಈಶ್ವರಪ್ಪ…” | ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ
ಮದುವೆ ಮಂಟಪದಲ್ಲಿ ಗುಟ್ಕಾ ಜಗಿದ ವರನಿಗೆ ಕಪಾಳಕ್ಕೆ ಬಾರಿಸಿ ಉಗುಳಿಸಿದ ವಧು! | ವಿಡಿಯೋ ವೈರಲ್
ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು
ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?
ಬಿಜೆಪಿ ನಾಯಕರೊಬ್ಬರ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ!
ಹಾಲು ಬೇಕೆಂದು ಹಠ ಮಾಡುತ್ತಿದ್ದ ಮಗುವನ್ನು ನೆಲಕ್ಕೆ ಬಡಿದು ಹತ್ಯೆ ಮಾಡಿದ ತಾಯಿ!