ತನಗೆ ಕಚ್ಚಿದ ಹಾವನ್ನು ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ಕಾರ್ಮಿಕ! - Mahanayaka
10:09 AM Thursday 12 - December 2024

ತನಗೆ ಕಚ್ಚಿದ ಹಾವನ್ನು ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ಕಾರ್ಮಿಕ!

tharikere
28/12/2022

ಚಿಕ್ಕಮಗಳೂರು: ತನಗೆ ಕಚ್ಚಿದ ಹಾವನ್ನು ಕಾರ್ಮಿಕನೋರ್ವ ಕೈಯಲ್ಲಿ ಹಿಡಿದುಕೊಂಡು ನೇರವಾಗಿ ಆಸ್ಪತ್ರೆಗೆ ಬಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.

ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ, ತನ್ನ ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ಬಂದಾಗ ಹಾವು ಕಚ್ಚಿದೆ. ಕಚ್ಚಿದ ಹಾವನ್ನು ಹಿಡಿದು ನೇರವಾಗಿ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದಾನೆ.

ವ್ಯಕ್ತಿಯನ್ನು ಕೊಲ್ಕತ್ತಾ ಮೂಲದ ಆಸೀಫ್  ಎಂದು ಗುರುತಿಸಲಾಗಿದೆ. ಈತನಿಗೆ ಕಚ್ಚಿದ ಹಾವು ಕೊಳಕು ಮಂಡಲ ಹಾವಾಗಿದೆ. ಸದ್ಯ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ