ಕಡಬ: ತಿಂಗಳ ಹಿಂದೆ ಆನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿಯ ಸಾವು
07/11/2023
ಕಡಬ: ತಿಂಗಳ ಹಿಂದೆ ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಗೇರ್ತಿಲ ನಿವಾಸಿಯಾಗಿದ್ದ ಚೋಮ ಎಂಬವರು ಮರ್ದಾಳದಿಂದ ತಮ್ಮ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಬಳಿಯಲ್ಲಿ ಆನೆ ದಾಳಿ ನಡೆಸಿತ್ತು. ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಬಳಿಕ ಅವರಿಗೆ ಚಿಕಿತ್ಸೆ ನೀಡಿ ಕೆಲವು ದಿನಗಳ ಹಿಂದೆಯಷ್ಟೇ ಮನೆಗೆ ಕರೆತರಲಾಗಿತ್ತು. ಆದರೆ ಇಂದು ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಆನೆ ದಾಳಿಗೆ ಬಲಿಯಾದ ಚೋಮ ಅವರಿಗೆ ಸರ್ಕಾರ ಪರಿಹಾರ ನೀಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.