ಭಾರೀ ಕಾಡ್ಗಿಚ್ಚಿಗೆ ಬೆಚ್ಚಿ ಬಿದ್ದ ಚಿಕ್ಕಮಗಳೂರು: ಬೆಂಕಿಯ ಕೆನ್ನಾಲಿಗೆಗೆ ಅರಣ್ಯ ಸಂಪತ್ತು ಭಸ್ಮ
![chikkamagaluru](https://www.mahanayaka.in/wp-content/uploads/2023/02/chikkamagaluru-1.jpg)
10/02/2023
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾದ ಪರಿಣಾಮ ಇಡೀ ಕಾಡೇ ಧಗಧಗಿಸಿದೆ.
ಕಾಡ್ಗಿಚ್ಚಿಗೆ ನೂರಾರು ಎಕರೆ ಪ್ರದೇಶದ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಇಡೀ ರಾತ್ರಿ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಭೀರಕವಾಗಿತ್ತು.
ಬೆಂಕಿಯ ತೀವ್ರತೆಗೆ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw