ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯನಿಂದ ಅಶ್ಲೀಲ ಚಿತ್ರ ವೀಕ್ಷಣೆ - Mahanayaka

ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯನಿಂದ ಅಶ್ಲೀಲ ಚಿತ್ರ ವೀಕ್ಷಣೆ

29/01/2021

ಬೆಂಗಳೂರು:  ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ಎಂಎಲ್ ಸಿ ಪ್ರಕಾಶ್ ರಾಥೋಡ್ ಅವರು ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆ ಎಂದು ವರದಿಯಾಗಿದ್ದು,  ಕಲಾಪದ ವೇಳೆಯಲ್ಲಿ ರಾಥೋಡ್ ತಮ್ಮ ಮೊಬೈಲ್ ಗ್ಯಾಲರಿಯಲ್ಲಿದ್ದ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕೆಲವು ವರ್ಷಗಳ ಹಿಂದೆ ಸದನದಲ್ಲಿ ಇಂತಹದ್ದೇ ಪ್ರಕರಣ ನಡೆದಿತ್ತು. ಕೆಲವು ಶಾಸಕರು ಸದನದ ಒಳಗೆ ಅಶ್ಲೀಲ ಚಿತ್ರ ವೀಕ್ಷಿಸಿ ದೇಶಾದ್ಯಂತ ಸುದ್ದಿಯಾಗಿದ್ದರು. ವಿಧಾನ ಪರಿಷತ್ ನ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅವರು ವಿಧಾನ ಪರಿಷತ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತಮ್ಮ ಗ್ಯಾಲರಿಯಲ್ಲಿದ್ದ ಫೋಟೋಗಳನ್ನು ಡಿಲೀಟ್ ಮಾಡುತ್ತಿದ್ದ ವೇಳೆ ಪ್ರಕಾಶ್ ರಾಥೋಡ್ ಅವರು ಈ ಚಿತ್ರಗಳನ್ನು ವೀಕ್ಷಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. ವಿಧಾನ ಪರಿಷತ್ ನಲ್ಲಿ ಜವಾಬ್ದಾರಿಯುತ ಸದಸ್ಯರ ಇಂತಹ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ