ಮತ್ತೆ ಮುಳುಗಡೆಯಾದ ಕಳಸ–ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ!
25/07/2024
ಚಿಕ್ಕಮಗಳೂರು: ಕಳಸ–ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಮತ್ತೆ ಮುಳುಗಡೆಯಾಗಿದ್ದು, ಕಳೆದ 15 ದಿನದಲ್ಲಿ 10ಕ್ಕೂ ಹೆಚ್ಚು ಬಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ.
ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗಿದೆ. ಈ ಮಳೆಯಿಂದಾಗಿ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ.
ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಯ ಸಂಪರ್ಕ ಕಡಿತವಾಗುತ್ತದೆ. ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗುತ್ತದೆ. ನಿರಂತರ ಮಳೆಯಿಂದಾಗಿ ಮಲೆನಾಡಿಗರು ಹೈರಾಣಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97