ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರ್ಕೇಸ್ಟ್ರಾ ಮಾಲಕ: ದೂರು ದಾಖಲು
ತುಮಕೂರು: ಆರ್ಕೇಸ್ಟ್ರಾ ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರೋಪದ ಮೇಲೆ ಸಂಜಯ್ ಮೆಲೋಡಿ ಆರ್ಕೇಸ್ಟ್ರಾ ಮಾಲಕ ನಾಣಿ ಹಂದ್ರಾಳ್ ವಿರುದ್ಧ ದೂರು ದಾಖಲಾಗಿದೆ.
ನಾಣಿ ಹಂದ್ರಾಳ್ ಆರ್ಕೇಸ್ಟ್ರಾ ಕಲಾವಿದೆಯರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ದಿನಕ್ಕೆ ಒಂದೂವರೆ ಸಾವಿರ ಕೊಡುತ್ತಾರೆ. ಏನು ತೊಂದರೆ ಆಗಲ್ಲ. ನಾನು ಜೊತೆಗೆ ಇರುತ್ತೇನೆ ಎಂದ ನಾಣಿ ಹಂದ್ರಾಳ್, ಮಹಿಳಾ ಕಲಾವಿದೆಯರಿಗೆ ಕರೆ ಮಾಡಿ ಹಣದ ಆಮಿಷ ಒಡ್ಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಕಲ್ಪತರುನಾಡು ಆರ್ಕೇಸ್ಟ್ರಾ ಮಾಲಕರು ಹಾಗೂ ಕ್ಷೇಮಾಭಿವೃದ್ದಿ ಸಂಘದಿಂದ ದೂರು ನೀಡಿದ್ದು, ಆರೋಪಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ನಾಣಿ ಹಂದ್ರಾಳ್ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಚ್ಛೇದನ ನೀಡಿಲ್ಲವೆಂದು ಪ್ರೀತಿಸಿ ಮದುವೆಯಾದವಳನ್ನೇ ಕೊಲೆಗೈದ ಪತಿ
ಬ್ರಾಹ್ಮಣ ಅನ್ನೋದು ಜಾತಿಯಲ್ಲ, ಅದು ಉನ್ನತ ಜೀವನ ವಿಧಾನ: ಬಿಜೆಪಿ ಹಿರಿಯ ನಾಯಕ ದಿನೇಶ್ ಶರ್ಮಾ
ಹಿರಿಯ ನಟ ಅಶ್ವತ್ಥ್ ನಾರಾಯಣ್ ಇನ್ನಿಲ್ಲ
ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳಿಂದ ಮೆರವಣಿಗೆ!: ಬೀದಿ ರಾಜಕೀಯ ಕ್ಯಾಂಪಸ್ ನೊಳಗೆ ನುಸುಳಿದ್ದು ಹೇಗೆ?
ಜೈಲಿನಂತೆ ಕಾಲೇಜಿನಲ್ಲಿ ಹಿಂದೂ-ಮುಸ್ಲಿಮರ ನಡುವೆ ಗೋಡೆ ನಿರ್ಮಾಣದ ಯತ್ನ: ಮುನೀರ್ ಕಾಟಿಪಳ್ಳ