ಪ್ರಚೋದನಾಕಾರಿ ಹೇಳಿಕೆ: ಕಾಳಿ ಸ್ವಾಮೀಜಿಗೆ ಕಾನೂನಿನ ಬಿಸಿ
ಬೆಂಗಳೂರು: ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಆತಂಕ ಸೃಷ್ಟಿಸುತ್ತಿರುವ ಕಾಳಿ ಸ್ವಾಮಿ ವಿರುದ್ಧ ಕಾನೂನು ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಹೇಳಿಕೆಯನ್ನು ನೀಡುತ್ತಿರುವ ಕಾಳಿ ಸ್ವಾಮಿಗೆ ಇದೀಗ ಕಾನೂನಿನ ಕಂಟಕ ಎದುರಾಗಿದ್ದು, ಕಾಳಿ ಸ್ವಾಮೀಜಿ ಹತ್ಯೆಗೆ ಪ್ರೇರಿಸುವಂತಹ ಹೇಳಿಕೆಗಳನ್ನು ಇತ್ತೀಚೆಗೆ ನೀಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka