ಕಾಲಿನಲ್ಲಿ ವೈಡ್ ಬಾಲ್ ಎಂದು ಸೂಚಿಸಿದ ಅಂಪೈರ್: ಬಿದ್ದು ಬಿದ್ದು ನಕ್ಕ ನೆಟ್ಟಿಗರು - Mahanayaka
7:26 AM Thursday 12 - December 2024

ಕಾಲಿನಲ್ಲಿ ವೈಡ್ ಬಾಲ್ ಎಂದು ಸೂಚಿಸಿದ ಅಂಪೈರ್: ಬಿದ್ದು ಬಿದ್ದು ನಕ್ಕ ನೆಟ್ಟಿಗರು

umpire
08/12/2021

ಕ್ರಿಕೆಟ್ ಪಂದ್ಯಾಟಗಳ ಸಂದರ್ಭದಲ್ಲಿ ಕೆಲವು ಅಂಪೈರ್ ಗಳು ತಮ್ಮ ವಿಶಿಷ್ಟ ಪ್ರತಿಭೆಯ ಮೂಲಕ ಕ್ರೀಡಾ ಪ್ರೇಮಿಗಳನ್ನು ಸೆಳೆಯುವುದುಂಟು. ಆದರೆ, ಇಲ್ಲೊಬ್ಬರು ಅಂಪೈರ್  ಇದೀಗ ವೈಡ್ ಬಾಲ್ ನ್ನು ವಿಚಿತ್ರವಾಗಿ ತೋರಿಸಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.

ವರದಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯ ಕ್ರಿಕೆಟ್ ಟೂರ್ನಮೆಂಟ್ ಪುರಂದರ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ, ಬೌಲರ್ ವೈಡ್ ಬಾಲ್ ಎಸೆದಿದ್ದು, ಈ ವೇಳೆ ಅಂಪೈರ್ ವೈಡ್ ಬಾಲ್ ಸೂಚಿಸಲು ತಲೆ ಕೆಳಗಾಗಿ ನಿಂತು ಕಾಲು ಅಗಲಿಸಿ ವೈಡ್ ಎಂದು ಸೂಚಿಸಿದ್ದಾರೆ.

ಅಂಪೈರ್ ನ ಈ ವಿಶಿಷ್ಟ ವೈಡ್ ಸೂಚನೆಗೆ ವೀಕ್ಷಕ ವಿವರಣೆ ನೀಡುತ್ತಿರುವವರು ಕೂಡ ಶಾಕ್ ಆಗಿದ್ದು, ಅಯ್ಯೋ… ಅಂಪೈರ್ ಇದೇನು ಮಾಡುತ್ತಿದ್ದಾರೆ ಎಂದು ಅಚ್ಚರಿಯಿಂದ ಕೇಳಿದ್ದಾರೆ. ಇದೀಗ ಈ ವಿಡಿಯೋವನ್ನು ಐಎಎಸ್ ಅಧಿಕಾರಿಯೊಬ್ಬರು ಸೋಮವಾರ ಮರು ಟ್ವೀಟ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಗನಕ್ಕೇರಿದ ಟೊಮೆಟೋ ಬೆಲೆ: ಗ್ರಾಹಕನ ಜೇಬಿಗೆ ಕತ್ತರಿ ಹಾಕುತ್ತಿರುವ ತರಕಾರಿ!

ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು | ಡಿ.ಕೆ.ಶಿವಕುಮಾರ್ ವ್ಯಂಗ್ಯ

ಸಿದ್ದರಾಮಯ್ಯ ವಿರುದ್ಧ ಮೇಲ್ವರ್ಗದವರು ಕುದಿಯುತ್ತಿದ್ದಾರೆ: ಸಿ.ಟಿ.ರವಿ ಆಕ್ರೋಶ

ನಮಗೆ ಕಾಂಗ್ರೆಸ್ ನವರ ಪ್ರಮಾಣ ಪತ್ರ ಬೇಕಾಗಿಲ್ಲ | ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿಗೆ ಯಾರ ಜೊತೆಗೂ ಮೈತ್ರಿಯ ಅಗತ್ಯವಿಲ್ಲ: ವಿ.ಶ್ರೀನಿವಾಸ್ ಪ್ರಸಾದ್

ಸತ್ಯದಪ್ಪೆ ಬೊಲ್ಲೆಯ ಬಯಕೆ/ ಸೀಮಂತ ಕಾರ್ಯಕ್ರಮ: ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 09

ಇತ್ತೀಚಿನ ಸುದ್ದಿ