ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

prabhakar bhat
05/04/2022

ಬಂಟ್ವಾಳ: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ರಕ್ತದೊತ್ತಡದಿಂದಾಗಿ ಅವರು ಅಸ್ವಸ್ಥರಾಗಿದ್ದಾರೆ ಎಂದು ಸದ್ಯ ಮಾಹಿತಿ ದೊರಕಿದ್ದು,  ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತಕ್ಷಣವೇ ಸಾಗಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

78 ವರ್ಷ ವಯಸ್ಸಿನ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮಂಗಳವಾರ ತಮ್ಮ ಶ್ರೀರಾಮ ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version