ಕಲ್ಮಾಡಿ ಚರ್ಚಿನ ಪ್ರತಿಷ್ಠಾಪನಾ ಮಹೋತ್ಸವದ ನೊವೆನಾ ಪ್ರಾರ್ಥನೆಗೆ ಚಾಲನೆ - Mahanayaka
1:26 AM Thursday 12 - December 2024

ಕಲ್ಮಾಡಿ ಚರ್ಚಿನ ಪ್ರತಿಷ್ಠಾಪನಾ ಮಹೋತ್ಸವದ ನೊವೆನಾ ಪ್ರಾರ್ಥನೆಗೆ ಚಾಲನೆ

novena
06/08/2022

ಉಡುಪಿ: ಕಲ್ಮಾಡಿ ವೆಲಂಕಣಿ ಮಾತೆ ಚರ್ಚಿನ ವಾರ್ಷಿಕ ಪ್ರತಿಷ್ಠಾಪನೆ ಮಹೋತ್ಸವದ ಪ್ರಯುಕ್ತ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಶನಿವಾರ ಚಾಲನೆ ನೀಡಲಾಯಿತು.

ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಇದರ ಪ್ರಧಾನ ಧರ್ಮಗುರು ವಂ| ವಲೇರಿಯನ್ ಮೆಂಡೊನ್ಸಾ ಅವರು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮೊದಲ ದಿನದ ನೊವೇನಾ ಪ್ರಾರ್ಥನೆ, ಬಲಿಪೂಜೆಯನ್ನು ನೆರವೇರಿಸಿ ಸಂದೇಶ ನೀಡಿದರು. ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರು ವಂ ಬ್ಯಾಪ್ಟಿಸ್ಟ್ ಮಿನೇಜಸ್, ಸಹಾಯಕ ಧರ್ಮಗುರು ವಂ. ರೋಯ್ ಲೋಬೊ, ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಅಂದ್ರಾದೆ, ಕಾರ್ಯದರ್ಶಿ ಶೋಭಾ ಮೆಂಡೊನ್ಸಾ, ಚರ್ಚಿನ ಸುವರ್ಣ ಮಹೋತ್ಸವ ಸಮಿತಿಯ ಸಂಚಾಲಕ ಸಂದೀಪ್ ಅಂದ್ರಾದೆ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಅಗೋಸ್ತ್ 15 ರಂದು ಘೋಷಣೆ ಮಾಡಲಾಗುವುದು ಮತ್ತು ಚರ್ಚಿನ ಸುವರ್ಣ ಮಹೋತ್ಸವ ವರ್ಷದ ಆಚರಣೆಯನ್ನು ಆಯೋಜಿಸಲಾಗಿದ್ದು, ದಿವ್ಯ ಬಲಿಪೂಜೆಯಲ್ಲಿ ಉಡುಪಿ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ, ಮಂಗಳೂರು ಧರ್ಮಾಧ್ಯಕ್ಷ ವಂ. ಡಾ. ಪೀಟರ್ ಪೌಲ್ ಸಲ್ಡಾನಾ, ಮಂಗಳೂರಿನ ನಿವೃತ ಬಿಷಪ್ ವಂ. ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ, ಶಿವಮೊಗ್ಗ ಧರ್ಮಾಧ್ಯಕ್ಷ ವಂ. ಡಾ. ಫ್ರಾನ್ಸಿಸ್ ಸೆರಾವೊ, ಬಳ್ಳಾರಿ ಧರ್ಮಾಧ್ಯಕ್ಷ ವಂ. ಡಾ. ಹೆನ್ರಿ ಡಿಸೋಜಾ, ಬೆಳ್ತಂಗಡಿ ಧರ್ಮಾಧ್ಯಕ್ಷ ವಂ. ಡಾ. ಲಾರೆನ್ಸ್ ಮುಕ್ಕುಯಿ, ಪುತ್ತೂರಿನ ಧರ್ಮಾಧ್ಯಕ್ಷ ವಂ. ಡಾ. ಗೀವರ್ಗಿಸ್ ಮಕಾರಿಯೋಸ್ ಕಲಾಯಿಲ್ ಭಾಗವಹಿಸಲಿದ್ದಾರೆ.

ಅಗೋಸ್ತ್ 14 ರಂದು ವೆಲಂಕಣಿ ಮಾತೆಯ ಮೆರವಣಿಗೆ ನಡೆಯಲಿದ್ದು ಉಡುಪಿ ಶಾಸಕ ರಘುಪತಿ ಭಟ್ ಮತ್ತು ಕಲ್ಮಾಡಿ ವಾರ್ಡ್ ಸದಸ್ಯ ಸುಂದರ ಕಲ್ಮಾಡಿ ಚಾಲನೆ ನೀಡಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ