ಕಲ್ಮಾಡಿಯಲ್ಲಿ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ - Mahanayaka

ಕಲ್ಮಾಡಿಯಲ್ಲಿ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ

velankani mate
14/08/2022

ಉಡುಪಿ: ಕಲ್ಮಾಡಿಯಲ್ಲಿನ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮತ್ತು ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಪ್ರಯುಕ್ತ ರವಿವಾರ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಆದಿಉಡುಪಿ ಜಂಕ್ಷನ್ ನಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು.

ಮೆರವಣಿಗೆಗೆ ಉಡುಪಿ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಲ್ಮಾಡಿ ವಾರ್ಡಿನ ಕೌನ್ಸಿಲರ್ ಸುಂದರ ಕಲ್ಮಾಡಿ, ಚರ್ಚಿನ ಧರ್ಮಗುರು ವಂ.ಬ್ಯಾಪ್ಟಿಸ್ಟ್ ಮಿನೇಜಸ್, ಸಹಾಯಕ ಧರ್ಮಗುರು ವಂ. ರೋಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂಜಯ್ ಅಂದ್ರಾದೆ, ಕಾರ್ಯದರ್ಶಿ ಶೋಭಾ ಮೆಂಡೋನ್ಸಾ, 20 ಆಯೋಗಗಳ ಸಂಯೋಜಕಿ ಐಡಾ ಡಿಸೋಜ, ಸುವರ್ಣ ಮಹೋತ್ಸವದ ಸಂಯೋಜಕ ಸಂದೀಪ್ ಅಂದ್ರಾದೆ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ