ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೇಸ್ತ್ರಿ ಸಾವು
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ(35) ಎಂಬುವವರು ಮಂಗಳವಾರ ರಾತ್ರಿ ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ.
ಕೃಷ್ಣಪ್ಪ ಪೂಜಾರಿಯವರು ಮೇಸ್ತ್ರಿ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಸುಮಾರು ಎಂಟು ಗಂಟೆಯ ಸಮಯಕ್ಕೆ ಕಾಣೆಯಾಗಿದ್ದರು. ಇವರು ನಾಪತ್ತೆಯಾಗಿದ್ದ ಬಗ್ಗೆ ಮನೆ ಮಂದಿ ಸುತ್ತಮುತ್ತ ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ ಆದರೆ ಪತ್ತೆಯಾಗಿರಲಿಲ್ಲ. ಬುಧವಾರ ಸಂಜೆ ಮೃತ ದೇಹವು ಬಾವಿಯಲ್ಲಿ ತೇಲಾಡುತ್ತಿರುವುದು ಮನೆಯವರಿಗೆ ಕಂಡಿದೆ.
ತಕ್ಷಣ ಬಾವಿಯಿಂದ ಮೃತದೇಹ ತೆಗೆಯಲಾಗಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಗುಂಡಿ ಮುಚ್ಚಿ ಜೀವ ಉಳಿಸಿ ಅಂದ್ರು, ರಸ್ತೆಯಲ್ಲೇ ಬಾಳೆಗಿಡ ನೆಟ್ರು!
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka