ಕಲುಷಿತ ನೀರು ಸೇವಿಸಿ 25ಕ್ಕೂ ಅಧಿಕ ಮಂದಿ ಅಸ್ವಸ್ಥ - Mahanayaka
3:31 AM Thursday 19 - September 2024

ಕಲುಷಿತ ನೀರು ಸೇವಿಸಿ 25ಕ್ಕೂ ಅಧಿಕ ಮಂದಿ ಅಸ್ವಸ್ಥ

water
09/10/2021

ಬಾಗಲಕೋಟೆ: ಕಲುಷಿತ ನೀರು ಸೇವಿಸಿ 25ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ನಾಗರಾಳದಲ್ಲಿ ನಡೆದಿದೆ. ಇಲ್ಲಿಗೆ ಕಲುಷಿತ ಸರಬರಾಜಾಗುತ್ತಿದ್ದು, ಇದರ ಪರಿಣಾಮ ಜನರ ಪ್ರಾಣಕ್ಕೆ ಅಪಾಯ ಸಂಭವಿಸುವಂತಹ ಗಂಭೀರವಾಗ ಘಟನೆ ನಡೆದಿದೆ.

ಆಸ್ಪತ್ರೆಗೆ ದಾಖಲಾಗಿರುವ 25 ಮಂದಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಗ್ರಾಮಕ್ಕೆ ನೀರು ಪೂರೈಕೆ ಮಾಡುತ್ತಿರುವ ಪೈಪ್ ಒಡೆದು ನೀರು ಕಲುಷಿತಗೊಂಡಿದೆ ಎನ್ನಲಾಗಿದೆ. ಇದನ್ನು ಸರಿಪಡಿಸುವ ಗೋಜಿಗೆ ಯಾರು ಕೂಡ ಹೋಗಿಲ್ಲ ಎಂದು ಹೇಳಲಾಗಿದೆ. ಇದರ ಪರಿಣಾಮ ಪೈಪ್ ನಲ್ಲಿ ಕಲುಷಿತ ನೀರು ಸರಬರಾಜಾಗಿದೆ ಎನ್ನಲಾಗುತ್ತಿದೆ.

ಸದ್ಯ ಘಟನಾ ಸ್ಥಳಕ್ಕೆ ಗುಳೇದಗುಡ್ಡ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ವಿಜಯಪುರದಲ್ಲಿ ಕೂಡ ಕಲುಷಿತ ನೀರು ಪೂರೈಕೆಯಾಗಿ 6 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಂಬಂಧಪಟ್ಟವರು ನೀರು ಪೂರೈಕೆ ಸಂಬಂಧ ಎಚ್ಚರಿಕೆ ವಹಿಸಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿವೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ!

ಮಂಗಳೂರು: ಬಾಲಕಿಯನ್ನು ಅಪಹರಿಸಿ ನಿಗೂಢ ಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರ!

ರೈತರ ಮಾರಣಹೋಮ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರ ಪುತ್ರ ಪೊಲೀಸರ ಮುಂದೆ ಹಾಜರು

26 ಬ್ರಾಹ್ಮಣೇತರ ಅರ್ಚಕರ ನೇಮಕ: ತಮಿಳುನಾಡು ಸರ್ಕಾರದ ಐತಿಹಾಸಿಕ ಹೆಜ್ಜೆ

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯ ಕೈ ಹಿಡಿದೆಳೆದು ಶಿಕ್ಷಕನಿಂದ ಅಸಭ್ಯ ವರ್ತನೆ | ವಿಡಿಯೋ ವೈರಲ್

ನಮ್ಮ ಮನೆಯಲ್ಲಿಯೂ ಹೆಂಡತಿ ಗದರುತ್ತಾರೆ | ಸಿಎಂ ಬಸವರಾಜ್ ಬೊಮ್ಮಾಯಿ

ದಸರ ಮುಗಿದ ತಕ್ಷಣವೇ 1ರಿಂದ 5ರವರೆಗೆ ಶಾಲೆ ಆರಂಭ | ಸಚಿವ ಬಿ.ಸಿ.ನಾಗೇಶ್

ಇತ್ತೀಚಿನ ಸುದ್ದಿ