ಕಲುಷಿತ ನೀರು ಸೇವಿಸಿ ಓರ್ವ ಸಾವು, 37 ಜನರು ಅಸ್ವಸ್ಥ! - Mahanayaka
1:01 AM Wednesday 11 - December 2024

ಕಲುಷಿತ ನೀರು ಸೇವಿಸಿ ಓರ್ವ ಸಾವು, 37 ಜನರು ಅಸ್ವಸ್ಥ!

dakshina kannada
26/10/2022

ಯಾದಗಿರಿ: ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‌‘ಪೇಟ್ ಗ್ರಾಮದಲ್ಲಿ ನಡೆದಿದೆ.

ಹೊನ್ನಪ್ಪ ಗೌಡ ಎಂಬವರು ಮೃತಪಟ್ಟವರು ಎಂದು ಗುರುತಿಲಾಗಿದೆ. 37 ಜನರು ಅಸ್ವಸ್ಥಗೊಂಡಿರುವ ಪ್ರಕರಣಗಳು ಪತ್ತೆಯಾಗಿವೆ.

ಕಳೆದ ಮೂರು ದಿನಗಳಲ್ಲಿ ಗ್ರಾಮದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಅವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂದು ಸಂಬಂಧವಿಲ್ಲ ಎಂದು ಶಹಾಪುರ ತಹಶೀಲ್ದಾರ್ ಮಧುರಾಜ್ ಹೇಳಿದ್ದಾರೆ.

ಬೆಳೆಗಳಿಗೆ ಕೀಟನಾಶಕ ಸಿಂಪಡಿಸುವ ಸಮಯದಲ್ಲಿ ಆ ಗಾಳಿಯನ್ನು ಉಸಿರಾಡಿದಾಗಲೂ ಜನರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಗಳಿರುತ್ತವೆ. ಹೊಟ್‌ಪೇಟ್‌ ನಲ್ಲಿರುವ ಪಿಎಚ್‌ ಸಿ ಉಪ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 31 ಮಂದಿ ಈಗಾಗಲೇ ಬಿಡುಗಡೆಯಾಗಿದ್ದು, ಇನ್ನೂ 6 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ವೈದ್ಯರ ತಂಡ ಮತ್ತು ಆಂಬ್ಯುಲೆನ್ಸ್ ಅನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಭಾನುವಾರ ನಾನು ಹೊಟ್‌ಪೇಟ್‌ ಗ್ರಾಮಕ್ಕೆ ಭೇಟಿ ನೀಡಿದ್ದೆ, ಈ ವೇಳೆ ಇಲ್ಲಿನ ಗ್ರಾಮಸ್ಥರು ಪೈಪ್‌ಗಳು ಹಾಳಾಗಿದ್ದರಿಂದ ಮಳೆ ನೀರು, ಚರಂಡಿ ನೀರು ಕುಡಿಯುವ ನೀರನ್ನು ಸೇರಿಕೊಂಡಿದೆ ಎಂದು ಆರೋಪಿಸಿದ್ದರು ಎಂದು ಅವರು ಹೇಳಿದರು.

ಇನ್ನೂ ಓವರ್‌ ಹೆಡ್‌ ಟ್ಯಾಂಕ್‌ ಕೂಡ ಹಲವು ತಿಂಗಳಿಂದ ಸ್ವಚ್ಛಗೊಳಿಸಿಲ್ಲ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬಂದಿದೆ. ಘಟನೆಯ ತನಿಖೆಯ ಬಳಿಕ ಸ್ಪಷ್ಟ ಕಾರಣ ತಿಳಿದು ಬರಬೇಕಿದೆ. ಆದರೆ, ಕುಡಿಯುವ ಶುದ್ಧ ನೀರು ಕೂಡ ದೊರಕಿಸಲು ಅಧಿಕಾರಿಗಳು, ಸರ್ಕಾರ ವಿಫಲವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ