ಕಲುಷಿತ ನೀರು ಸೇವನೆ: 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗದ್ದಿಗೇರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.
ಬರಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗದ್ದಿಗೇರಹಟ್ಟಿ ಗ್ರಾಮದ 20ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಗ್ರಾಮಕ್ಕೆ ಸರಬರಾಜಾಗುವ ಓವರ್ ಟ್ಯಾಂಕ್ಗೆ ಕಲುಷಿತ ನೀರು ಸೇರಿದ್ದರಿಂದ ಸಮಸ್ಯೆ ಉದ್ಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಗ್ರಾಮಕ್ಕೆ ನೀರು ಸರಬರಾಜು ಆಗುವ ಪೈಪ್ಲೈನ್ ಒಡೆದು ಹೋಗಿದ್ದು, ಇದನ್ನು ಸರಿಪಡಿಸದೇ ಇರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಜನರಿಗೆ ಕಳೆದ ಮೂರು ದಿನಗಳಿಂದ ವಾಂತಿ ಭೇದಿ ಕಾಣಿಸಿಕೊಂಡಿದ್ದು, ವೈದ್ಯರ ತಂಡ ಗ್ರಾಮದಲ್ಲೇ ಬೀಡುಬಿಟ್ಟು ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾರ್ಯಾಚರಣೆ ವೇಳೆ ನಾಲ್ಕನೇ ಅಂತಸ್ತಿನಿಂದ ಬಿದ್ದ ಅಗ್ನಿಶಾಮಕ ಸಿಬ್ಬಂದಿ
ಸ್ನೇಹಿತನೊಂದಿಗೆ ಹೊಟೇಲ್‍ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಮಹಿಳೆಯರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ ಕಳಿಸಿ ಪೊಲೀಸರಿಗೆ ಸವಾಲು ಹಾಕಿದಾತನ ಅರೆಸ್ಟ್
ಶಾಲಾ ವಾಹನ ಡಿಕ್ಕಿ: ಮೆಸ್ಕಾಂ ಉದ್ಯೋಗಿ ಸಾವು