ಅಪ್ರಾಪ್ತೆಯ ಅತ್ಯಾಚಾರಗೈದ ಕಾಮುಕನಿಗೆ 15 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ - Mahanayaka

ಅಪ್ರಾಪ್ತೆಯ ಅತ್ಯಾಚಾರಗೈದ ಕಾಮುಕನಿಗೆ 15 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

sitharama
05/10/2022

ಅಪ್ರಾಪ್ತೆಯನ್ನು ಅತ್ಯಾಚಾರಗೈದಿರುವ ಆರೋಪ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ — 2 ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಮುಕ ಯುವಕನಿಗೆ 15 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ವಿಧಿಸಲಾಗಿದೆ.

ನಗರದ ತೋಡಾರು ಗ್ರಾಮ ನಿವಾಸಿ ಸೀತಾರಾಮ ಶಿಕ್ಷೆಗೊಳಗಾದವನಾಗಿದ್ದಾನೆ.  ಸೀತಾರಾಮ ತನ್ನ ಸಂಬಂಧಿಯಾಗಿರುವ ಅಪ್ರಾಪ್ತೆಯನ್ನು 2019ರ ಜನವರಿ 8ರಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ‌. ಅಲ್ಲಿ ಬಲಾತ್ಕಾರವಾಗಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದಾನೆ‌. ಅಲ್ಲದೆ ಕೃತ್ಯದ ವೀಡಿಯೋ ಚಿತ್ರೀಕರಿಸಿ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಈ ವಿಚಾರವನ್ನು ಸಂತ್ರಸ್ತ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ.

ಆದರೆ ಈ ಬಗ್ಗೆ 2019ರ ನವೆಂಬರ್ 11ರಂದು ತಡವಾಗಿ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಬಜ್ಪೆ ಠಾಣಾ ನಿರೀಕ್ಷಕ ಕೆ.ಆರ್.ನಾಯಕ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.


Provided by

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ – 2 ನ್ಯಾಯಾಲಯ ಆರೋಪಿ ಸೀತಾರಾಮ ತಪ್ಪಿತಸ್ಥನೆಂದು ಘೋಷಣೆ ಮಾಡಿ 15 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ