ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ | ಬಸ್ ನಲ್ಲಿದ್ದವರ ಸ್ಥಿತಿ ಏನು ಗೊತ್ತಾ?

bus
12/04/2021

ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ಕಳೆದುಕೊಂಡ ಮಿನಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಜಮ್ಮು-ಕಾಶ್ಮೀರದ ದೋಡಾದಲ್ಲಿ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಮಿಸ್​ ಬಸ್  ಜಮ್ಮು-ಕಾಶ್ಮೀರದ ದೋಡಾದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಳವಾಗಿದ್ದ ಕಂದಕಕ್ಕೆ ಉರುಳಿದ್ದು, ಪರಿಣಾಮವಾಗಿ 6 ಮಂದಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ನಡೆಸಲಾಗುವುದು ಎಂದು ಘಟನೆಗೆ ಸಂಬಂಧಿಸಿದಂತೆ ದೋಡಾ ಡೆಪ್ಯುಟಿ ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version