ಕಂದಕಕ್ಕೆ ಉರುಳಿದ್ದ ಬೋಲೇರೋ ಜೀಪ್: ಸ್ಥಳದಲ್ಲೇ ಮಹಿಳೆ ಸಾವು
ಶಿವಮೊಗ್ಗ: ಬೋಲೇರೋ ಜೀಪ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಸಮೀಪ ನಡೆದಿದೆ.
ಕುಷ್ಟಗಿ ಮೂಲದ ಗೌರಮ್ಮ( 40) ಮೃತ ಮಹಿಳೆ. ನಿನ್ನೆ ತಡರಾತ್ರಿ ತುಮರಿ ಸಮೀಪದ ಒಕ್ಕೋಡಿ ಕ್ರಾಸ್ ಬಳಿ ಬೋಲೇರೋ ಜೀಪ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಈ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಇನ್ನೂ ಐವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಸಾಗರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಹಿಳೆಯ ನಗ್ನ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
ಕೀವ್ ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ, ದಯವಿಟ್ಟು ಸಹಾಯ ಮಾಡಿ: ಭಾರತೀಯ ವೈದ್ಯ ಕುಟುಂಬದ ಮನವಿ
ಉಕ್ರೇನ್: ನವೀನ್ ಬಲಿಯಾದ ಸ್ಥಳದಿಂದ 100 ಮೀಟರ್ ಅಂತರದಲ್ಲಿ ಸಿಲುಕಿದ್ದಾರೆ ಉಜಿರೆ ವಿದ್ಯಾರ್ಥಿನಿ!
ನವೀನ್ ಸಾವಿಗೆ ನೀಟ್ ವ್ಯವಸ್ಥೆಯೇ ಕಾರಣ: ನೀಟ್ ರದ್ದುಗೊಳಿಸಲು ಬೃಹತ್ ಅಭಿಯಾನ
ಉಕ್ರೇನ್ ಒಳಗಡೆ ನಮಗೆ ಸರ್ಕಾರ ಯಾವುದೇ ರಕ್ಷಣೆ ನೀಡಲಿಲ್ಲ | ಕೇಂದ್ರ ಸರ್ಕಾರದ ನಡೆಯ ಬಗ್ಗೆ ವಿದ್ಯಾರ್ಥಿಗಳಿಂದ ಬೇಸರ