ಸರಿಗಮಪ ವೇದಿಕೆಗೆ ಬೇಗ ಬಂದು ಸೇರಿಕೊಳ್ಳುತ್ತೇನೆ | ಕನ್ನಡಿಗರಿಗೆ ಸಂತಸದ ಸುದ್ದಿ ನೀಡಿದ ಹಂಸಲೇಖ - Mahanayaka
10:57 AM Thursday 14 - November 2024

ಸರಿಗಮಪ ವೇದಿಕೆಗೆ ಬೇಗ ಬಂದು ಸೇರಿಕೊಳ್ಳುತ್ತೇನೆ | ಕನ್ನಡಿಗರಿಗೆ ಸಂತಸದ ಸುದ್ದಿ ನೀಡಿದ ಹಂಸಲೇಖ

hamsalekha
28/11/2021

ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ಸರಿಗಮಪ ವೇದಿಕೆಯಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ‘ಝೀ ಕನ್ನಡ’ದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇದೀಗ ಎಲ್ಲ ಅನುಮಾನಗಳಿಗೂ ಹಂಸಲೇಖ ಅವರೇ ತೆರೆ ಎಳೆದಿದ್ದಾರೆ.

ಈ ಬಗ್ಗೆ ಇಂದು ಸಂದೇಶವೊಂದನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿರುವ ಹಂಸಲೇಖ ಅವರು, “ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭೂಮಿಕೆ ಅದು ಮನಸ್ಸು ಮನಸ್ಸುಗಳನ್ನು ನೇಯುವ ವೇದಿಕೆ ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ. ಬೇಗ ಬಂದು ಸೇರಿಕೊಳ್ಳುತ್ತೇನೆ ಎಂದು ಬರೆದಿದ್ದು, ಈ ಮೂಲಕ ಅಭಿಮಾನಿಗಳಿಗೆ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಹಂಸಲೇಖ ಅವರು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಸ್ಪೃಶ್ಯತೆ ಹಾಗೂ ಸಾಮಾಜಿಕ ಅನಿಷ್ಠಗಳ ವಿರುದ್ಧ ಮಾತನಾಡಿರುವ ಹಿನ್ನೆಲೆಯಲ್ಲಿ ಅವರನ್ನು ಗುರಿ ಮಾಡಿ ವಿವಾದಗಳನ್ನು ಎಬ್ಬಿಸಲಾಗಿತ್ತು. ಹಂಸಲೇಖ ಅವರು ಸ್ವತಃ ಕ್ಷಮೆಯಾಚಿಸಿದ ಬಳಿಕವೂ ಅವರ ವೃತ್ತಿ ಜೀವನವನ್ನೇ ಮುಗಿಸುವ ಪ್ರಯತ್ನಗಳು ನಡೆದಿದ್ದವು ಎನ್ನುವ ಆರೋಪಗಳು ಕೇಳಿ ಬಂದಿವೆ.

ಈ ನಡುವೆ ಹಂಸಲೇಖ ಅವರು ವಿಚಾರಣೆಗಾಗಿ ಠಾಣೆ ಬಸವನಗುಡಿ ಠಾಣೆಗೆ ಹೋಗಿರುವ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳನ್ನು ಛೂ ಬಿಟ್ಟು ಹಂಸಲೇಖ ಅವಮಾನಿಸಲು ಕೂಡ ಪ್ರಯತ್ನ ನಡೆಸಲಾಗಿತ್ತು. ಆದರೆ, ಇದೇ ವೇಳೆ ವಿವಿಧ ಸಂಘಟನೆಗಳು ಹಂಸಲೇಖ ಅವರ ಪರ ನಿಂತ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ಪ್ರಯತ್ನ ವಿಫಲವಾಗಿದೆ ಎನ್ನುವ ಮಾತುಗಳು ಸದ್ಯ ಕೇಳಿ ಬಂದಿದೆ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಮಿಕ್ರಾನ್  ಭೀತಿಯ ನಡುವೆಯೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರಿಗೆ ಕೊವಿಡ್ ದೃಢ!

ಖಾಲಿ ಪೇಪರ್ ಗೆ ಮೃತ ವೃದ್ಧೆಯ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು!

ಕೊವಿಡ್ ಸೋಂಕು ಮತ್ತೆ ಉಲ್ಬಣ: ಹೊಸ ಮಾರ್ಗಸೂಚಿ ಬಿಡುಗಡೆ

ನಮ್ಮಲ್ಲಿ ಸಮಾಧಾನವಾಗದಿದ್ದಾಗ ಬಿಜೆಪಿಗೆ ಹೋದ ಬಂಡುಕೋರ | ರಮೇಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪಂಚ್

ಮುಂದಿನ ಸರಿಗಮಪ ವೇದಿಕೆಯಲ್ಲಿ ಹಂಸಲೇಖ ಇಲ್ಲದಿದ್ದರೆ, ‘ಝೀ ಕನ್ನಡ’ಕ್ಕೆ ಆಗಲಿದೆ ಭಾರೀ ನಷ್ಟ!

ತಮ್ಮ ನೇಣು ಬಿಗಿದುಕೊಂಡಿದ್ದ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಅಕ್ಕಾ!

ಇತ್ತೀಚಿನ ಸುದ್ದಿ