ಐಐಟಿ ವಿದ್ಯಾರ್ಥಿನಿಯಿಂದ ಲೈಂಗಿಕ ಕಿರುಕುಳ ಆರೋಪ: ಕಾನ್ಪುರ ಎಸಿಪಿ ಮೊಹ್ಸಿನ್ ಖಾನ್ ಅಮಾನತು

13/03/2025
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ-ಕಾನ್ಪುರ) ಯ ಪಿಎಚ್ ಡಿ ವಿದ್ಯಾರ್ಥಿನಿಯು ಲೈಂಗಿಕ ಕಿರುಕುಳದ ಆರೋಪ ಮಾಡಿದ ಮೂರು ತಿಂಗಳ ನಂತರ ಕಾನ್ಪುರ ಎಸಿಪಿ ಮೊಹ್ಸಿನ್ ಖಾನ್ ಅವರನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿದ ವರದಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕಾನ್ಪುರ ಪೊಲೀಸ್ ಆಯುಕ್ತರು ವರದಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ.
ವರದಿಯನ್ನು ಪರಿಗಣಿಸಿದ ಯುಪಿ ಸರ್ಕಾರ ಎಸಿಪಿ ಮೊಹ್ಸಿನ್ ಖಾನ್ ಅವರನ್ನು ಅಮಾನತುಗೊಳಿಸಿದೆ. ಕಳೆದ ವಾರ ಸಂತ್ರಸ್ತೆ ಡಿಜಿಪಿ ಪ್ರಶಾಂತ್ ಕುಮಾರ್ ಅವರಿಗೆ ಪತ್ರ ಬರೆದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj