ಕಾನೂನು ಕೈಗೆತ್ತಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ - Mahanayaka
4:56 AM Saturday 25 - January 2025

ಕಾನೂನು ಕೈಗೆತ್ತಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

cm basavaraj bommai
20/12/2021

ಬೆಳಗಾವಿ: ಬೆಳಗಾವಿ ಸೇರಿದಂತೆ ಕರ್ನಾಟಕದ ಯಾವುದೇ ಭಾಗದಲ್ಲಿ ಕಾನೂನು ಕ್ರಮವನ್ನು ಕೈಗೆ ತೆಗೆದುಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಇಂದು ಅಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಿರ್ಣಾಯಕವಾಗಿ ಕ್ರಮ ತೆಗೆದುಕೊಂಡು ಯಾರೂ ಕೂಡ ಇಂತಹ ಪುಂಡಾಟಿಕೆ ಮುಂದುವರಿಸಿಕೊಂಡು ಹೋಗದಂತೆ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ. ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.

ಹಿಂದಿನ ಸರ್ಕಾರಗಳು ಯಾವುದೂ ಈ ಕೆಲಸಗಳನ್ನು ಮಾಡುತ್ತಿರಲಿಲ್ಲ. ಯಾರನ್ನೋ ಬಂಧಿಸುತ್ತಿದ್ದರು. ನಮ್ಮ ಸರ್ಕಾರದ ಗೃಹ ಇಲಾಖೆ ಪ್ರಮುಖರನ್ನು ಬಂಧಿಸಿ ಗಲಭೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರ ಸರ್ಕಾರದೊಂದಿಗೆ ಅಲ್ಲಿನ ಗೃಹ ಇಲಾಖೆ ಕಾರ್ಯದರ್ಶಿಗಳ ಜೊತೆ, ಡಿಜಿಗಳ ಜೊತೆ ನಮ್ಮ ಗೃಹ ಇಲಾಖೆ ಅಧಿಕಾರಿಗಳು ಮಾತನಾಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಆಸ್ತಿಪಾಸ್ತಿ, ಜನರ ರಕ್ಷಣೆ ಮಾಡಬೇಕೆಂದು, ವಿಶೇಷವಾಗಿ ಮಹಾನಗರ ರಕ್ಷಣೆ ಮಾಡಬೇಕೆಂದು ಕೂಡ ಹೇಳಿದ್ದೇವೆ, ಇವತ್ತು ಕೂಡ ಸಲಹೆ, ಸೂಚನೆ ನೀಡುತ್ತೇನೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್

ಉಡುಪಿಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ತಂದೆಗೆ ಜೀವಾವಧಿ ಶಿಕ್ಷೆ

ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ: ಕಿಡಿಗೇಡಿಗಳ ಬಂಧನಕ್ಕೆ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ

ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ ಶಿಪ್‌: ಕಿಡಂಬಿ ಶ್ರೀಕಾಂತ್‌ ಗೆ ಬೆಳ್ಳಿ ಪದಕ

ಬೈಕ್‌ ಗೆ ಲಾರಿ ಡಿಕ್ಕಿ: ಇಬ್ಬರು ಮಕ್ಕಳು ಸಹಿತ ತಾಯಿ ದಾರುಣ ಸಾವು

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ