ಕಾನೂನು ಸುವ್ಯವಸ್ಥೆ ಹತೋಟಿಗೆ ಬರಲಿ ಎಂದು ಚಾಮುಂಡಿಯನ್ನು ಬೇಡಿದ್ದೇನೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ!
	
	
	
	
	
ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯಬಾರದು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರಬೇಕು. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ ಮತ್ತು ಪೊಲೀಸ್ ಇಲಾಖೆಗೆ ಶಕ್ತಿ ಕೊಡು ಎಂದು ಚಾಮುಂಡೇಶ್ವರಿ ದೇವಿಯನ್ನು ಬೇಡಿಕೊಂಡಿದ್ದೇನೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಈ ಹೇಳಿಕೆ ನೀಡಿದ್ದು, ರಾಜ್ಯದ ಜನತೆಗೆ ಒಳ್ಳೆಯದು ಮಾಡು ಎಂದು ದೇವಿಯನ್ನು ಬೇಡಿದ್ದೇನೆ ಎಂದು ಅವರು ಹೇಳಿದರು.
ಎಲ್ಲರಿಗೂ ಒಳ್ಳೆಯ ಮನಸ್ಸು ಕೊಡು ಎಂದು ಪ್ರಾರ್ಥಿಸಿದ್ದೇನೆ. ನಾನು ಗೃಹ ಸಚಿವನಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದಿದ್ದೇನೆ. ದರ್ಶನ ಮಾಡಿ ನನಗೆ ಬಹಳ ಸಂತೋಷವಾಯಿತು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ಪ್ರಾರ್ಥಿಸಿದ್ದೇನೆ ಎಂದು ಅವರು ಹೇಳಿದರು.
ಇನ್ನಷ್ಟು ಸುದ್ದಿಗಳು…
ಸುದ್ದಿ ಪ್ರಸಾರ ಮಾಡುವುದಾಗಿ ಬ್ಲ್ಯಾಕ್ ಮೇಲ್ | ವರದಿಗಾರ ಸೇರಿದಂತೆ 6 ಮಂದಿ ಅರೆಸ್ಟ್
ಪರಿಶಿಷ್ಟ ಜಾತಿಯ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ | ಆರೋಪಿ ಪಿಎಸ್ ಐ ಅರ್ಜುನ್ ಜಾಮೀನು ಅರ್ಜಿ ವಜಾ
ಗೃಹ ಸಚಿವರನ್ನು ರೇಪ್ ಮಾಡಿದ ಕಾಂಗ್ರೆಸ್ ನಾಯಕರ ಮೇಲೆ ಕೇಸ್ ಮಾಡಿ | ಡಿ.ಕೆ.ಶಿವಕುಮಾರ್ ಲೇವಡಿ
ಪತ್ನಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದ | ಕೊನೆಗೂ ಬಯಲಾಯ್ತು ಪತಿಯ ಹೇಯ ಕೃತ್ಯ




























