ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ವಕೀಲ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪಿ ಅರೆಸ್ಟ್
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48 ವರ್ಷ ವಯಸ್ಸಿನ ಅನಂತ್ ಭಟ್, ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಎಂದು ಆರೋಪಿಸಲಾಗಿದೆ.
ಆರೋಪಿ ರಾಜೇಶ್ ಭಟ್ ಬಳಸುತ್ತಿದ್ದ ಕಾರು ಮತ್ತು ಮೊಬೈಲ್ ಫೋನ್ ನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರ ತನಿಖೆಯನ್ನು ಹಾದಿ ತಪ್ಪಿಸಲು ಅನಂತ್ ಭಟ್ ಯತ್ನಿಸಿದ್ದ ಎಂದು ಹೇಳಲಾಗಿದೆ.
ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ತನ್ನ ಕಚೇರಿಯಲ್ಲಿ ತರಬೇತಿಗಾಗಿ ಬಂದಿದ್ದ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿ ರಾಜೇಶ್ ಭಟ್ ತಲೆ ಮರೆಸಿಕೊಂಡಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka