ಕಾಪು: ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು - Mahanayaka

ಕಾಪು: ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು

18/11/2020

ಕಾಪು: ರೈಲಿನಿಂದ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ಕಾಪುವಿನ ಇನ್ನಂಜೆ ಬಳಿ ನಡೆದಿದ್ದು,  ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೂ ಕೆಳಗೆ ಬಿದ್ದಿದ್ದಾರೆ.


Provided by

ಮೃತಪಟ್ಟ ವ್ಯಕ್ತಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ರೈಲಿನಿಂದ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯರ ನೆರವಿನೊಂದಿಗೆ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು.

ಉಡುಪಿ ಜಿಲ್ಲಾಸ್ಪತ್ರೆ ವೈದ್ಯರು ತಕ್ಷಣವೇ ಚಿಕಿತ್ಸೆ ನೀಡಿದರಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಇತ್ತೀಚಿನ ಸುದ್ದಿ