ಕಾಪು: ವ್ಯಕ್ತಿಯನ್ನು ಇರಿದು ಬರ್ಬರ ಹತ್ಯೆ: ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ - Mahanayaka
1:58 AM Wednesday 5 - February 2025

ಕಾಪು: ವ್ಯಕ್ತಿಯನ್ನು ಇರಿದು ಬರ್ಬರ ಹತ್ಯೆ: ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ

kapu
05/02/2023

ಉಡುಪಿ: ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ  ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ.

ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರಿಗೆ ಇಬ್ಬರು ವ್ಯಕ್ತಿಗಳು ಇರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಭೂ ವ್ಯವಹಾರದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ