10:54 AM Wednesday 12 - March 2025

ಕರಸೇವಕ ಶ್ರೀಕಾಂತ ಪೂಜಾರಿಗೆ ಜಾಮೀನು ಮಂಜೂರು

shrikanta pujari
05/01/2024

ಹುಬ್ಬಳ್ಳಿ: 31 ವರ್ಷಗಳ ಹಳೆಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಆರೋಪಿ ಕರಸೇವಕ ಶ್ರೀಕಾಂತ ಪೂಜಾರಿಗೆ ಜಾಮೀನು ಮಂಜೂರಾಗಿದೆ.

ಡಿಸೆಂಬರ್ 21ರಂದು ಶ್ರೀಕಾಂತ ಪೂಜಾರಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಶ್ರೀಕಾಂತ ಪೂಜಾರಿಯ ಬಂಧನ ರಾಜಕೀಯ ತಿರುವು ಪಡೆದುಕೊಂಡ ಬಳಿಕ ರಾಜ್ಯದಲ್ಲಿ ಬಿಜೆಪಿ ನಾಯಕರು ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. “ನನ್ನನ್ನೂ ಬಂಧಿಸಿ” ಎಂಬ ಸ್ಲೋಗನ್ ಹಿಡಿದು ಪ್ರತಿಭಟನೆ ನಡೆಸಿದ್ದರು.

ಒಂದೆಡೆ ಅಯೋಧ್ಯೆಯಲ್ಲಿ ರಾಮಮಂದಿರ  ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧವಾಗುತ್ತಿದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕರಸೇವಕರನ್ನು ಬಂಧಿಸುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ಶ್ರೀ ಕಾಂತ ಪೂಜಾರಿಗೆ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಇತ್ತೀಚಿನ ಸುದ್ದಿ

Exit mobile version