ಬಸ್—ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಚಾಲಕನ ದಾರುಣ ಸಾವು

ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಕ್ರಾಸ್ ನ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರ ಸೋಮವಾರ ರಾತ್ರಿ 9:15 ಕ್ಕೆ ನಡೆದಿದೆ.
ಮೃತರನ್ನು ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ 36ವರ್ಷದ ಸಂತೋಷ್ ನಾಯಕ್ ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಹೆಬ್ರಿ ಮೂಲಕ ಕಾರ್ಕಳ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ದುರ್ಗಾಂಬಾ ಬಸ್, ಹಿರ್ಗಾನ ಕಡೆಯಿಂದ ನೆಲ್ಲಿಕಟ್ಟೆಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಪಿಕಪ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕ ವಾಹನದಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಸ್ ಚಾಲಕ ಅತೀ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ತಿರುವಿನಲ್ಲಿ ಬಸ್ ನಿಯಂತ್ರಣಕ್ಕೆ ಸಿಗದೇ ನೇರವಾಗಿ ಪಿಕಪ್ ಗೆ ಅಪ್ಪಳಿಸಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನಾಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka