ಕಾಂಗ್ರೆಸ್ ಕಾರ್ಮಿಕ ವಿಭಾಗದ ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷರಾಗಿ ಲೋಕೇಶ್ ಆರ್. ಆಯ್ಕೆ

20/04/2021
ಬೆಂಗಳೂರು: ಕಾರ್ಮಿಕ ವಿಭಾಗದ ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷರಾಗಿ ಲೋಕೇಶ್ ಆರ್. ಅವರನ್ನು ನೇಮಿಸಿ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡರು ಆದೇಶ ನೀಡಿದ್ದಾರೆ.
ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ನೀಡಿರುವ ಜವಾಬ್ದಾರಿಯನ್ನು ಸ್ಥಳೀಯ ನಾಯಕರ ಸಹಕಾರದೊಂದಿಗೆ ನಿರ್ವಹಿಸಿ ಕಾರ್ಮಿಕರ ಏಳಿಗೆಗೆ ಶ್ರಮಿಸುವಂತೆ ಲೋಕೇಶ್ ಆರ್ ಅವರಿಗೆ ಪಕ್ಷದ ಮುಖಂಡರು ಸೂಚನೆ ನೀಡಿದ್ದಾರೆ.
ಬೆಂಗಳೂರು ಉಸ್ತುವಾರಿಗಳು ಮತ್ತ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಬಿ.ಆರ್.ದಿನೇಶ್ ಅವರ ಅನುಮೋದನೆಯೊಂದಿಗೆ ಲೋಕೇಶ್ ಆರ್ ಅವರನ್ನು ಕಾರ್ಮಿಕ ವಿಭಾಗದ ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.