ಮೆಟ್ರೋ ಕಾಮಗಾರಿಯ ಕಾರ್ಮಿಕನನ್ನು ಇರಿದು ಹತ್ಯೆ ಮಾಡಿದ ಪಾಪಿಗಳು! - Mahanayaka

ಮೆಟ್ರೋ ಕಾಮಗಾರಿಯ ಕಾರ್ಮಿಕನನ್ನು ಇರಿದು ಹತ್ಯೆ ಮಾಡಿದ ಪಾಪಿಗಳು!

bangalore
14/06/2022

ಬೆಂಗಳೂರು: ಮೆಟ್ರೋ ಕಾಮಗಾರಿ ಕೆಲಸ ಮಾಡುವ ಕಾರ್ಮಿಕನನ್ನು ದುಷ್ಕರ್ಮಿಗಳು ಇರಿದು ಹತ್ಯೆ ಮಾಡಿರುವ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ನಿವಾಸಿ 37 ವರ್ಷ ವಯಸ್ಸಿನ  ಬಿಕಾಸ್ ಹತ್ಯೆಗೀಡಾದ ಯುವಕನಾಗಿದ್ದಾನೆ. ಪುಲಿಕೇಶಿನಗರದ ಎಂಎಂ ರಸ್ತೆ ನಾಲಾ ಬಳಿ ದುಷ್ಕರ್ಮಿಗಳು ತಡರಾತ್ರಿ ಬಿಕಾಸ್‍ ನ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾರೆ.

ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದ್ದು ಸಾರ್ವಜನಿಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಹತ್ಯೆ ಮಾಡಿದವರು ಯಾರು, ಕೊಲೆಗೆ ಕಾರಣ ಏನು? ಎನ್ನುವ ಬಗ್ಗೆ ಯಾವುದೇ ಮಾಹಿತಿಗಳು ತಿಳಿದು ಬಂದಿಲ್ಲ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ