ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಯಾದಗಿರಿಗೆ ಕೊನೆಯ ಸ್ಥಾನ

Karnataka 2nd PUC Results 2025 Live: ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟಿಸಿದರು.
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಈ ಬಾರಿ 73.45 ಫಲಿತಾಂಶ ದಾಖಲಾಗಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ದ್ವಿತೀಯ ಸ್ಥಾನ ದಕ್ಷಿಣ ಕನ್ನಡ ಜಿಲ್ಲೆ ಪಡೆದುಕೊಂಡಿದೆ.
ಉಡುಪಿ 93.90 ಫಲಿತಾಂಶ ದಾಖಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆ 93.57 ಫಲಿತಾಂಶ ದಾಖಲಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದ್ದು, 48.45 ಫಲಿತಾಂಶ ದಾಖಲಿಸಿದೆ.
ಕಲಾ ವಿಭಾಗದಲ್ಲಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ: 600ರಲ್ಲಿ 597 ಅಂಕ ಪಡೆದಿದ್ದಾರೆ.
ಬಳ್ಳಾರಿಯ ನಿರ್ಮಲಾಗೆ 596 ಅಂಕಗಳನ್ನು ಪಡೆದುಕೊಂಡಿದ್ದಾರೆ.
ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಮೊದಲ ರಾಂಕ್ ಗಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕರ್ನಾಟಕ ಪಿಯುಸಿ ಫಲಿತಾಂಶ 2025 ಪ್ರಕಟವಾದ ನಂತರ, ಸಹಸ್ರಾರು ಮಂದಿ ಏಕಕಾಲದಲ್ಲಿ ವೆಬ್ಸೈಟ್ ತೆರೆಯುವ ಕಾರಣ ಶಿಕ್ಷಣ ಇಲಾಖೆ ವೆಬ್ಸೈಟ್ ಸರ್ವರ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಫಲಿತಾಂಶ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿಗಳು ಆತಂಕಪಡಬೇಕಿಲ್ಲ. ಸರ್ವರ್ ಒತ್ತಡ ಕಡಿಮೆ ಆದ ತಕ್ಷಣ ನಿಮ್ಮ ರಿಸಲ್ಟ್ ಪಡೆಯಬಹುದು.
ಫಲಿತಾಂಶ ಪಡೆಯಲು ಅಧಿಕೃತ ವೆಬ್ ಸೈಟ್ ಗೆ https://karresults.nic.in/ ಅಥವಾ http://kseab.karnataka.gov.in/ ಗೆ ಭೇಟಿ ನೀಡಬೇಕು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: